ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಿಲಕ ನಗರದ ಎರಡನೇ ಕ್ರಾಸಿನಲ್ಲಿರುವ ಶ್ರೀ ಪರಮ ಹಂಸ ನಿವಾಸದಲ್ಲಿ ಮಾರ್ಚ್ 20ರಂದು ಭಗವಾನ್ ಶ್ರೀರಾಮಕೃಷ್ಣ ಪರಮಹಂಸರ 186ನೇ ಜನ್ಮದಿನೋತ್ಸವ ಆಚರಿಸಲಾಗುತ್ತಿದೆ.
ಇದನ್ನೂ ಓದಿ | ಕೆಜಿಎಫ್ ಚಾಪ್ಟರ್ 2, ಯುವರತ್ನ ಉಚಿತವಾಗಿ ನೋಡುವ ಸುವರ್ಣಾವಕಾಶ
ಪ್ರತಿ ವರ್ಷ ಆಯೋಜಿಸಲಾಗುವ ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ರಕ್ಷಣಾಧಿಕಾರಿ ರವಿ ಡಿ.ಚನ್ನಣ್ಣನವರ್ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕ ಎಚ್.ಎ.ಭವೇಂದ್ರ ಕುಮಾರ್ ತಿಳಿಸಿದ್ದಾರೆ.