ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣದ ಸ್ನಾತಕೋತ್ತರ, ಸ್ನಾತಕ, ಪಿ.ಜಿ ಡಿಪ್ಲೋಮಾ, ಡಿಪ್ಲೋಮಾ ಮತ್ತು ಇತರೆ ಕೋರ್ಸುಗಳ ಅರ್ಜಿ ಮತ್ತು ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಎರಡು ಪಟ್ಟು ಅವಧಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಕೋರ್ಸ್ ಗಳಿಗೆ ಹಾಲಿ ಚಾಲ್ತಿಯಲ್ಲಿರುವ ದಂಡ ಶುಲ್ಕ 3960 ರೂಪಾಯಿಗಳನ್ನು ನಿಗದಿತ ಪರೀಕ್ಷಾ ಶುಲ್ಕದೊಂದಿಗೆ ಆನ್ಲೈನ್ನಲ್ಲಿ ಪಾವತಿಸಲು ಮಾರ್ಚ್ 22 ಕೊನೆಯ ದಿನಾಂಕವಾಗಿತ್ತು. ಆದರೀಗ ಹಲವು ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಲು ಸಾಧ್ಯವಾಗದ ಕಾರಣ ಅವಧಿಯನ್ನು ವಿಸ್ತರಿಸಲು ಮನವಿ ಮಾಡಿರುವ ಹಿನ್ನಲೆಯಲ್ಲಿ ಮಾರ್ಚ್ 25ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಉಪಕುಲಸಚಿವರು ತಿಳಿಸಿದ್ದಾರೆ.