ಮೂವರು ವಿದ್ಯಾರ್ಥಿಗಳಿಗೆ ಸೇರಿ ಇಂದು 23 ಪಾಸಿಟಿವ್, ತಾಲೂಕುವಾರು ವರದಿ ಇಲ್ಲಿದೆ

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 23 ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಅದರಲ್ಲಿ ಮೂವರು ವಿದ್ಯಾರ್ಥಿಗಳಿದ್ದಾರೆ.

ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!

2,452 ಮಾದರಿಗಳನ್ನು ಪರೀಕ್ಷಿಸಿದ್ದು, ಅದರಲ್ಲಿ‌ 1,684 ನೆಗೆಟಿವ್ ಬಂದಿವೆ. 695 ವಿದ್ಯಾರ್ಥಿಗಳ ಹಾಗೂ 54 ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು ಅದರಲ್ಲಿ ಮೂವರು ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ತಾಲೂಕುವಾರು ವರದಿ | ಶಿವಮೊಗ್ಗ 7, ಭದ್ರಾವತಿ, ಸೊರಬ, ತೀರ್ಥಹಳ್ಳಿ ತಲಾ 2, ಸಾಗರ 3, ಶಿಕಾರಿಪುರ 1 ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದ್ದ ಮೂವರಲ್ಲಿ ಪಾಸಿಟಿವ್ ಬಂದಿದೆ.

error: Content is protected !!