ಕಳೆದ 20 ದಿನಗಳಿಂದ ಬಂದ್ ಇದ್ದ ಹೊನ್ನಾಳಿ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಹೊನ್ನಾಳಿ ರಸ್ತೆಯಲ್ಲಿರುವ ರೈಲ್ವೆ ಮೇಲ್ಸೇತುವೆ ದುರಸ್ತಿ ಕಾಮಗಾರಿ ಅವಧಿಗಿಂತ ಮೊದಲೇ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ.

ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!

ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿಯ ರೈಲ್ವೆ ಮೇಲ್ಸೇತುವೆಯ ಸ್ಟ್ರಿಪ್ ಸೀಲ್ ಅಳವಡಿಕೆಗಾಗಿ ಕಾಮಗಾರಿ ನಿರ್ವಹಿಸಲು ಜಿಲ್ಲಾಧಿಕಾರಿ ಅವರು ಏಕಮುಖ ಸಂಚಾರ ಆದೇಶಿಸಿ, ಒಂದು ತಿಂಗಳ ಒಳಗಾಗಿ ದುರಸ್ತಿ ಕಾರ್ಯ ಪೂರ್ಣಗೊಳಿಸಲು ಸೂಚನೆ ನೀಡಿದ್ದರು. ಲೋಕೋಪಯೋಗಿ ಇಲಾಖೆ ವತಿಯಿಂದ ದುರಸ್ತಿ ಕಾಮಗಾರಿ ಕೈಗೊಂಡು 21 ದಿನಗಳಲ್ಲಿ ಪೂರ್ಣಗೊಳಿಸಿ ಇದೀಗ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ಹೊಸದಾಗಿ 8 ಮೀಟರ್ ಉದ್ದದ 21 ಸ್ಟ್ರಿಪ್ ಸೀಲ್ ಜಾಯಿಂಟ್ ಗಳನ್ನು ಅಳವಡಿಸಿ, ಡಾಂಬರೀಕರಣ ಹಾಗೂ ಪ್ಯಾರಾಪಿಟ್ ವಾಲ್ ಗಳಿಗೆ ಬಣ್ಣ ಬಳಿದು ಕಾಮಗಾರಿ ಪೂರ್ಣಗೊಳಿಸಲಾಗಿದೆ.

error: Content is protected !!