ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಾಸಕ ರಮೇಶ್ ಜಾರಕಿಹೊಳಿ ಮುಖವಾಡ ಧರಿಸಿದ ವ್ಯಕ್ತಿಯ ಕೈಗಳಿಗೆ ಬೇಡಿ ಹಾಕಿ, ನಗರದ ಗೋಪಿ ವೃತ್ತದಿಂದ ಮಹಾವೀರ ಸರ್ಕಲ್ ವರೆಗೆ ಸೋಮವಾರ ರಾತ್ರಿ ಎನ್.ಎಸ್.ಯು.ಐ ವಿನೂತನವಾಗಿ ಪ್ರತಿಭಟನೆ ನಡೆಸಿತು.
ಎಫ್.ಐ.ಆರ್ ದಾಖಲಾದರೂ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಪೊಲೀಸರು ಏಕೆ ಬಂಧಿಸಿಲ್ಲ. ರಕ್ಷಣಾ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕೂಡಲೇ ಜಾರಕಿಹೊಳಿಯನ್ನು ಬಂಧಿಸಿ, ಸಂತ್ರಸ್ತೆ ಹಾಗೂ ಆಕೆಯ ಕುಟುಂಬ ರಕ್ಷಣೆ ಒದಗಿಸಬೇಕು.
-ಕೆ.ಬಿ.ಪ್ರಸನ್ನಕುಮಾರ್, ಮಾಜಿ ಶಾಸಕ
ಕಾರಣವೇನು | ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ಕಾರಿನ ಮೇಲೆ ಚಪ್ಪಲಿ ಮತ್ತು ಕಲ್ಲು ತೂರಾಟ ಮಾಡಿದ್ದನ್ನು ಖಂಡಿಸಿ ಎನ್.ಎಸ್.ಯು.ಐ ಕಾರ್ಯಕರ್ತರು ಜಾರಕಿಹೊಳಿ ವಿರುದ್ಧ ಕಿಡಿಕಾರಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಮಧುಸೂದನ್, ಚೇತನ್, ಬಾಲಾಜಿ, ಪ್ರಮುಖರಾದ ವಿಜಯ್ ಕುಮಾರ್ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.