‘ಮುಖ್ಯಮಂತ್ರಿ ಪಟ್ಟ ಕಳೆದುಕೊಂಡ ಬಳಿಕ ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ’

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಹುಚ್ಚು ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರಿಗೆ ರಾಜ್ಯದ ಪ್ರಗತಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಆರೋಪಿಸಿದರು.
ರಾಜೀನಾಮೆ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಸಿದ್ದರಾಮಯ್ಯ ಹೆಸರು ಬುಕ್ಕಲ್ಲೂ ಇಲ್ಲ, ಲೆಕ್ಕದಲ್ಲೂ ಇಲ್ಲ. ಅವರ ಸ್ಥಿತಿ ತೊಟ್ಟಿಯಲ್ಲಿರುವ ಕಸದಂತಾಗಿದೆ. ಹೀಗಾಗಿ, ಅವರು ವಿರೋಧ ಪಕ್ಷದ ನಾಯಕ ಸ್ಥಾನದಿಂದ ಮೊದಲು ಕೆಳಗಿಳಿಯಲಿ ಎಂದು ಸವಾಲು ಹಾಕಿದರು.
ಬೆಂಗಳೂರಿಗೆ ಹೋದಾಗ ಲೆಕ್ಕ ಕೊಡುವೆ | ಬೆಂಗಳೂರಿಗೆ ಹೋದಾಗ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಭೇಟಿ ಮಾಡುವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಆದ ಅಭಿವೃದ್ಧಿ, ಬದಲಾವಣೆಗಳ ಬಗ್ಗೆ ವರದಿ ಕೊಡುವೆ ಎಂದು ಈಶ್ವರಪ್ಪ ಹೇಳಿದರು.

error: Content is protected !!