ಶಿವಮೊಗ್ಗ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಇವರಿಗೆ ರಾಜ್ಯಮಟ್ಟದ ಪ್ರಶಸ್ತಿ, ಯಾರು ಆಯ್ಕೆ, ಕಾರಣವೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ 2020-21ನೇ ಸಾಲಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದಕ್ಕಾಗಿ ಅಧಿಕಾರಿ, ಸಿಬ್ಬಂದಿ, ಕಾಯಕ ಬಂಧು, ಇತರೆ ವ್ಯಕ್ತಿಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸೊರಬ ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ಡಿ.ಇ.ದಿನೇಶ್, ಹೊಸನಗರ ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ಎಂ.ಬಿ.ನಾಗಭೂಷಣ್, ಸಾಗರ ತಾಲ್ಲೂಕು ಪಂಚಾಯತಿ ತಾಲ್ಲೂಕ್ ಐ.ಇ.ಸಿ ಸಂಯೋಜಕ ಕೆ.ನಿತ್ಯಾನಂದ್, ಶಿವಮೊಗ್ಗ ತಾಲ್ಲೂಕು ಮಂಡಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಎಂ.ಮಂಜುನಾಥ್, ಶಿಕಾರಿಪುರ ತಾಲ್ಲೂಕಿನ ಅಮಟೇಕೊಪ್ಪ ಗ್ರಾಮ ಪಂಚಾಯಿತಿ ಗಣಕಯಂತ್ರ ನಿರ್ವಾಹಕ ಶಿವನಗೌಡ, ಶಿಕಾರಿಪುರ ತಾಲ್ಲೂಕು ಬಿ.ಎಫ್.ಟಿ.ಲೋಹಿತೇಕುಮಾರ್ ಇವರು ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

error: Content is protected !!