‘ಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಸರ್ಕಾರ ನಿರ್ಧಾರ’

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೀಸಲಾತಿ ಹೆಚ್ಚಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಅದನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದರು.
ಮೀಸಲಾತಿ ಏರಿಕೆಯ ಬಗ್ಗೆ ರಾಜ್ಯಗಳಿಂದ ಸುಪ್ರೀಂ ಕೋರ್ಟ್ ಅಭಿಪ್ರಾಯ ಕೋರಿದೆ. ಅದರನ್ವಯ, ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಶಾಸಕರು, ಸಚಿವರು, ಸಂಸದರು ಹೀಗೆ ಪಡೆದವರೇ ಮತ್ತೆ ಮೀಸಲಾತಿ ಸೌಲಭ್ಯ ಪಡೆಯುತ್ತಿದ್ದಾರೆ. ಇದನ್ನು ಹೋಗಲಾಡಿಸಿ ನೈಜ ಫಲಾನುಭವಿಗಳಿಗೆ ಮೀಸಲಾತಿ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂಧರು.
ಡಾ.ಕೆ.ಜಿ. ವೆಂಕಟೇಶ್ ವಿಶೇಷ ಉಪನ್ಯಾಸ ನೀಡಿದರು.ಶಾಸಕರಾದ ಆಯನೂರು ಮಂಜುನಾಥ, ಆರ್. ಪ್ರಸನ್ನಕುಮಾರ್, ಶಾಸಕ ಕೆ.ಬಿ.ಅಶೋಕ ನಾಯ್ಕ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಜಿಪಂ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಮೇಯರ್ ಸುನೀತಾ ಅಣ್ಣಪ್ಪ, ಡಿಸಿ ಕೆ.ಬಿ.ಶಿವಕುಮಾರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್, ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಉಪಸ್ಥಿತರಿದ್ದರು.

error: Content is protected !!