ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಎರಡನೇ ಸಲ ಕೊರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

 

 

ಸುದ್ದಿ ಕಣಜ.ಕಾಂ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

READ | ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ನಾಲ್ವರು ಕೆ.ಎಸ್.ಆರ್.ಟಿ.ಸಿ ನೌಕರರು ಸಸ್ಪೆಂಡ್, ಡ್ಯೂಟಿಗೆ ಹಾಜರಾಗದ ನಾಲ್ವರ ಎತ್ತಂಗಡಿ

ಜ್ವರ ಹಾಗೂ ಭುಜದ ನೋವಿನ ಹಿನ್ನೆಲೆ ಅವರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿ ಸೋಂಕು ತಗಲಿರುವುದು ದೃಢಪಟ್ಟಿದೆ. ತಕ್ಷಣ ಮಣಿಪಾಲ್ ಗೆ ದಾಖಲಿಸಲಾಗಿದೆ.

ಎರಡು ದಿನಗಳ ಹಿಂದಷ್ಟೇ ಯಡಿಯೂರಪ್ಪ ಅವರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು. ಆದರೆ, ಆಗ ವರದಿ ನೆಗೆಟಿವ್ ಬಂದಿದೆ. ಮತ್ತೊಮ್ಮೆ ಪರೀಕ್ಷಿಸಿದ್ದು ಪಾಸಿಟಿವ್ ಇರುವುದು ಶುಕ್ರವಾರ ಗೊತ್ತಾಗಿದೆ. ಕಳೆದ ವರ್ಷ ಕೂಡ ಸಿಎಂಗೆ ಕೊರೊನಾ ಪಾಸಿಟಿವ್ ಬಂದಿತ್ತು.
ಸಿಎಂ ಟ್ವೀಟ್: ಮುಖ್ಯಮಂತ್ರಿಗಳು ಈ ಬಗ್ಗೆ ಟ್ವೀಟ್ ಮಾಡಿದ್ದು, ಪಾಸಿಟಿವ್ ಬಂದಿರುವ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ನಲ್ಲಿರುವಂತೆ ಮನವಿ ಮಾಡಿದ್ದಾರೆ.
ಯಡಿಯೂರಪ್ಪ ಹಿತೈಷಿಗಳು ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.

CMBSY Tweet

error: Content is protected !!