ಪ್ರತಿ ದಿನ ರಾತ್ರಿ 9 ಗಂಟೆಗೆ ಶಿವಮೊಗ್ಗ ಬಂದ್, 144 ಜಾರಿ, ಹುಷಾರ್ ಉಲ್ಲಂಘಿಸಿದರೆ ಬೀಳುತ್ತೆ ಕೇಸ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಏಪ್ರಿಲ್ 21ರಿಂದಲೇ ಅನ್ವಯವಾಗುವಂತೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ಕಫ್ರ್ಯೂ ಜಾರಿಗೊಂಡಿದೆ. ಈ ಅವಧಿಯಲ್ಲಿ ಯಾವುದೇ ಚಟುವಟಿಕಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

READ | ವಿಟಿಯು ಪರೀಕ್ಷೆ ಮುಂದೂಡಿಕೆ ಇಲ್ಲ, ವೇಳಾಪಟ್ಟಿಯಂತೆಯೇ ನಡೆಯಲಿವೆ ಪರೀಕ್ಷೆ

ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬುಧವಾರ ನಡೆದ ಕೊರೊನಾ ಪೀಡಿತರ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಸಿ.ಆರ್.ಪಿ.ಸಿ. 1973ರ ಕಲಂ 144 (1)ರ ಅನ್ವಯ ಏಪ್ರಿಲ್ 21ರಿಂದ ಮೇ 4ರ ವರೆಗೆ ನಿತ್ಯ ರಾತ್ರಿ 9ರಿಂದ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಇರಲಿದೆ. ಉಲ್ಲಂಘಿಸಿದ್ದಲ್ಲಿ ಐಪಿಸಿ ಸೆಕ್ಷನ್ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51ರಿಂದ 60ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಸಹಕಾರ ನೀಡಿ.
– ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ, ಶಿವಮೊಗ್ಗ

ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಪೂರ್ಣ ಕಫ್ರ್ಯೂ ಜಾರಿಯಾಗಲಿದೆ. ಇದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವ ಕುರಿತು ಈಗಾಗಲೇ ಪೆÇಲೀಸ್ ಇಲಾಖೆಗೆ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ಪ್ರಚಾರ | ತೀರ್ಥಹಳ್ಳಿ ಮತ್ತು ಭದ್ರಾವತಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ. ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಯಾವುದೇ ಕಾರಣಕ್ಕೂ ಗುಂಪು ಸೇರಲು ಅವಕಾಶವಿಲ್ಲ. ಕಫ್ರ್ಯೂ ಅವಧಿಯಲ್ಲಿ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

DC order 144
36 ಗಂಟೆಯಲ್ಲಿ ರಿಪೋರ್ಟ್ | ಪ್ರತಿ ದಿನ 3 ಸಾವಿರ ಮಂದಿಯ ಕೊರೊನಾ ತಪಾಸಣೆ ನಡೆಸಬೇಕು. ತಪಾಸಣಾ ವರದಿ ಗರಿಷ್ಠ 36 ಗಂಟೆಯ ಒಳಗಾಗಿ ಲಭಿಸುವಂತೆ ವ್ಯವಸ್ಥೆ ಮಾಡಬೇಕು ಎಂದು ಸಿಮ್ಸ್ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ.ಶ್ರೀಧರ್, ಡಿ.ಎಚ್.ಒ ಡಾ.ರಾಜೇಶ್ ಸುರಗಿಹಳ್ಳಿ, ಡಾ.ಶಂಕರಪ್ಪ, ಡಾ.ಮಹೇಂದ್ರ ಮತ್ತಿತರರು ಉಪಸ್ಥಿತರಿದ್ದರು.

error: Content is protected !!