‘ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆ ಕೈವಾಡ ಶಂಕೆ’

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಮುಸ್ಲಿಂ ಸಂಘಟನೆಗಳು ಬೆಡ್ ಬ್ಲಾಕಿಂಗ್ ದಂಧೆಗೆ ಇಳಿದಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಗಂಭೀರವಾಗಿ ಆರೋಪಿಸಿದರು.

READ | ಜಿಲ್ಲಾಡಳಿತ ಶಾಕ್, ಇಂದಿನಿಂದ ಫಸ್ಟ್ ಡೋಸ್ ಕೊರೊನಾ‌ ಲಸಿಕೆ ಸ್ಥಗಿತ, ಕಾರಣವೇನು?

KSE minನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದವರೇ ಇದ್ದಾರೆ. ಹೀಗಾಗಿ, ಈ ದಂಧೆಯ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಅವ್ಯಾಹತವಾಗಿ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿರುವುದು ಸಂಸದ ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರು ಬಯಲಿಗೆ ತಂದಿದ್ದಾರೆ. ಈಬಗ್ಗೆ ಸುದೀರ್ಘ ತನಿಖೆ ನಡೆಸಿ ಯಾರ ಕೈವಾಡ ಇದೆ ಎಂಬುವುದನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಿದರು.

error: Content is protected !!