ರೆಡ್ ಅಲರ್ಟ್ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಬಸ್ ಸಂಚಾರಕ್ಕೆ ಬ್ರೇಕ್, ಅವಘಡ ಸಂಭವಿಸಿದರೆ ಅಧಿಕಾರಿಯೇ ಹೊಣೆ!

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಡ್ ಘೋಷಣೆ ಮಾಡಿದೆ.‌ಈ‌ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಅಗತ್ಯ ಕ್ರಮಕ್ಕೆ ಮುಂದಾಗಿದೆ.

https://www.suddikanaja.com/2021/05/14/red-alert-in-shivamogga/

ಜಿಲ್ಲೆಯ ಜಲಾಶಯ, ನಾಲೆ, ನದಿ ದಂಡೆಗಳ ಪಾತ್ರದಲ್ಲಿರುವ ನಿವಾಸಿಗಳು ತುರ್ತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ‌‌ ಕೆ.ಬಿ.ಶಿವಕುಮಾರ್ ಸೂಚಿಸಿದ್ದಾರೆ.

ಭಾರೀ ಮಳೆಯಿಂದ ಅನಾಹುತ ಸಂಭವಿಸಬಹುದಾದ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ಬಸ್ಸುಗಳನ್ನು ರಸ್ತೆಗೆ ಇಳಿಸದಂತೆ ಹಾಗೂ ಭಾರೀ ವರ್ಷಧಾರೆಯಾಗುವ ಆಗುಂಬೆಯಂತಹ ಪ್ರದೇಶದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡದಂತೆ ನಿರ್ದೇಶಿಸಿದ್ದಾರೆ.
ಒಂದೊಮ್ಮೆ ಅವಘಡಗಳು ಸಂಭವಿಸಿದಲ್ಲಿ ಅಲ್ಲಿನ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿಸಲಾಗುವುದು ಎಂದರು.
ಸಿಡಿಲಿಗೆ ಬಲಿಯಾದವರಿಗೆ ಪರಿಹಾರ | ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚಿಗೆ ಸಿಡಿಲಿನಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ತುರ್ತು ಪರಿಹಾರ ಧನ ಬಿಡುಗಡೆ ಮಾಡುವಂತೆ ತಹಸೀಲ್ದಾರರಿಗೆ ಸೂಚಿಸಿದರು.
ಮಳೆ ಹಾನಿಯಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತಹ ಸಂದರ್ಭ ಎದುರಾದರೆ ಅದನ್ನು ನಿರ್ವಹಣೆ ಮಾಡಲು ಪ್ರತ್ಯೇಕ ಆರೋಗ್ಯ ಕೇಂದ್ರ ಹಾಗೂ ವಸತಿ ವ್ಯವಸ್ಥೆ ಮಾಡಿಕೊಂಡಿರಲು ಸೂಚಿಸಿದ ಅವರು ಕೊರೊನಾ ಸೋಂಕಿತರಿಂದ ಈ ಕೇಂದ್ರ ಸಂಪೂರ್ಣ ಪ್ರತ್ಯೇಕವಾಗಿರುವಂತೆ ನೋಡಿಕೊಳ್ಳಬೇಕು.
ಅಲ್ಲದೆ ಪ್ರತಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಟಾಂ ಟಾಂ ಮೂಲಕ ಅನಗತ್ಯವಾಗಿ ಮನೆಯಿಂದ ಹೊರಗೆ ಬರದೆ ಕೊರೋನ ಸೋಂಕು ನಿಯಂತ್ರಣ ಕಾರ್ಯಕ್ಕೆ ಸಹಕರಿಸುವಂತೆ ಮನವಿ ಮಾಡಲು ಸೂಚಿಸಿದರು.

https://www.suddikanaja.com/2021/02/08/penalty-on-food-feeding-to-animals-in-agumbe-ghat/

error: Content is protected !!