ಉದ್ಘಾಟನೆಗೊಳ್ಳಲಿದೆ 100 ಹಾಸಿಗೆಯ ಕೋವಿಡ್ ಚಿಕಿತ್ಸಾ ಘಟಕ, ಏನೇನು ಸೌಲಭ್ಯ ಲಭ್ಯ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ತಾತ್ಕಾಲಿಕವಾಗಿ ಕೋವಿಡ್ ಚಿಕಿತ್ಸಾ ಘಟಕವನ್ನು ಆರಂಭಿಸಲಾಗುತ್ತಿದೆ. ಇಲ್ಲಿ ಎ-ಸಿಮ್ಟಮೆಟಿಕ್ ಕೊರೊನಾ ರೋಗಿಗಳನ್ನು ಸೇರಿಸಿಕೊಳ್ಳಲಾಗುವುದು.

READ | ಶಿವಮೊಗ್ಗ, ಭದ್ರಾವತಿಯಲ್ಲಿ ಕೊರೊನಾ ಡಬಲ್ ಸೆಂಚ್ಯೂರಿ, 14 ಜನ ಸಾವು

ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿರುವುದರಿಂದ ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ದಾಖಲಾಗುತ್ತಿದ್ದಾರೆ. ಇದರಿಂದ ಆಸ್ಪತ್ರೆ ಮತ್ತು ವೈದ್ಯರ ಮೇಲೆ ಒತ್ತಡ ಹೆಚ್ಚುತ್ತಿದೆ. ಇದನ್ನು ಸಮರ್ಥವಾಗಿ ನಿಭಾಯಿಸುವ ಮತ್ತು ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾಭಾರತಿ ಕರ್ನಾಟಕ ಸಂಘಟನೆಯಿಂದ ಘಟಕ ಆರಂಭಿಸಲಾಗಿದೆ.

ಚಿಕಿತ್ಸಾ ಘಟಕದಲ್ಲಿ ಒಟ್ಟು 100 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಇಲ್ಲಿ ಆಕ್ಸಿಜನ್ ಸೇರಿದಂತೆ ಇನ್ನಿತರ ಸೌಲಭ್ಯಗಳು ಲಭ್ಯ ಇರಲಿವೆ. ಗುರುವಾರದಿಂದ ಆರಂಭಗೊಳ್ಳಲಿರುವ ಘಟಕದಲ್ಲಿ ಮಾಡಿಕೊಳ್ಳಲಾಗಿರುವ ಸೌಲಭ್ಯಗಳನ್ನು ಪರಿಶೀಲಿಸುವುದಕ್ಕಾಗಿ ಜಿಲ್ಲಾ ಉಸ್ತುವಾರಿ ಕೆ.ಎಸ್.ಈಶ್ವರಪ್ಪ, ಜಿಪಂ ಸದಸ್ಯ ಕೆ.ಈ.ಕಾಂತೇಶ್ ಭೇಟಿ ನೀಡಿದರು. ಈ ವೇಳೆ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

https://www.suddikanaja.com/2021/05/15/covid-positive-case-raise-in-shivamogga/

error: Content is protected !!