ತೀರ್ಥಹಳ್ಳಿಗೆ ಸಿಎಂ ಯಡಿಯೂರಪ್ಪ ನೀಡಿದ ಕೊರೊನಾ‌ ಟಾರ್ಗೆಟ್ ಏನು?

 

 

ಸುದ್ದಿ‌ ಕಣಜ.ಕಾಂ
ತೀರ್ಥಹಳ್ಳಿ: ತಾಲೂಕಿನಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.10 ಕ್ಕೆ ಇಳಿಸುವ ನಿಟ್ಟಿನಲ್ಲಿ‌ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

READ | ಮಗಳ ಬರ್ತ್ ಡೇ ದಿನವೇ ಅಪ್ಪ ಕೊರೊನಾಗೆ ಬಲಿ

ತಾಲೂಕಿನ ಅರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಕೆ.ಭಾಸ್ಕರ್ ಅವರೊಂದಿಗೆ ಮುಖ್ಯಮಂತ್ರಿ ಅವರು ವಿಡಿಯೋ ಸಂವಾದದ ಮೂಲಕ ಮಾಹಿತಿಯನ್ನು ಪಡೆದುಕೊಂಡು ಸೂಚನೆ ನೀಡಿದರು.
ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಮದುವೆ, ಜಾತ್ರೆಯಂತಹ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ನಿರ್ದೇಶನ ನೀಡಿದರು‌.

https://www.suddikanaja.com/2021/04/19/covid-control-room-in-all-talukas-of-shivamogga/

ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಭಾಸ್ಕರ್ ಅವರು ಮಾಹಿತಿ ನೀಡಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಇದುವರೆಗೆ 51 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಟಾಸ್ಕ್ ಫೋರ್ಸ್ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಪಾಸಿಟಿವ್ ವ್ಯಕ್ತಿಗಳಿಗೆ ಮೆಡಿಕಲ್ ಕಿಟ್ ನೀಡಲಾಗುತ್ತಿದೆ ಎಂದು ಹೇಳಿದರು.

ಸಚಿವ ಕೆ.ಎಸ್.ಈಶ್ವರಪ್ಪ, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಎಸ್ಪಿ ಲಕ್ಷ್ಮೀಪ್ರಸಾದ್, ಡಿಸಿ‌ ಕೆ.ಬಿ.ಶಿವಕುಮಾರ್ ಉಪಸ್ಥಿತರಿದ್ದರು.

https://www.suddikanaja.com/2020/12/19/solid-waste-management-in-shivamogga-city/

error: Content is protected !!