ಸಿಎಂ ಯಡಿಯೂರಪ್ಪ ಶಿವಮೊಗ್ಗಕ್ಕೆ ಭೇಷ್ ಎನ್ನಲು ಕಾರಣವೇನು? ಆರ್.ಡಿ.ಪಿ.ಆರ್. ಅಧಿಕಾರಿ, ಸಿಬ್ಬಂದಿಯೂ ಇನ್ಮುಂದೆ ಕೊರೊನಾ ವಾರಿಯರ್ಸ್

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕನ್ನು ಉತ್ತಮವಾಗಿ ನಿಯಂತ್ರಿಸುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://www.suddikanaja.com/2021/05/22/covid-care-center-in-wards/

ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ನಡೆದ ವಿಡಿಯೋ ಸಂವಾದದ ವೇಳೆ ಶಿವಮೊಗ್ಗದಲ್ಲಿ‌ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದ ನಂತರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಡಿಯೋ‌ ಕಾನ್ಫರೆನ್ಸ್ ಬಳಿಕ ಮಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.‌ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಅವರು 4 ಜಿಲ್ಲೆಗಳ 40 ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಗ್ರಾಮೀಣ ಭಾಗದಲ್ಲಿನ ಕೊರೊನಾ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಕೊರೊನಾ ಪಾಸಿಟಿವಿ ದರವನ್ನು ಇನ್ನಷ್ಟು ತಗ್ಗಿಸಲು ಕಠಿಣ ಕ್ರಮಗಳನ್ನು ಮುಂದುವರೆಸಲು ಸೂಚನೆ ನೀಡಿದ್ದಾರೆ ಎಂದರು.

https://www.suddikanaja.com/2021/05/10/tight-police-security-in-shivamogga/

ಹೋಮ್ ಐಸೋಲೇಷನ್ ಗಿಲ್ಲ‌ ಅವಕಾಶ | ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣವನ್ನು ಗಮನದಲ್ಲಿರಿಸಿ ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 17 ಕೋವಿಡ್ ಕೇರ್ ಸೆಂಟರ್‌ ಗಳು ಕಾರ್ಯ ನಿರ್ವಹಿಸುತ್ತಿವೆ. ಕೊರೊನಾ ಪಾಸಿಟಿವ್ ವ್ಯಕ್ತಿಗಳು ಕಡ್ಡಾಯವಾಗಿ ಕೇರ್ ಸೆಂಟರ್‌ನಲ್ಲಿ ದಾಖಲಾಗಲು ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಹೋಮ್ ಐಸೋಲೇಷನ್‍ಗೆ ಅನುಮತಿ ನೀಡದಿರುವಂತೆ ತಿಳಿಸಲಾಗಿದೆ.
ಶಿವಮೊಗ್ಗ ನಗರದಲ್ಲಿ ತಲಾ ನಾಲ್ಕು ವಾರ್ಡ್‌ ಗಳಿಗೆ ಒಂದರಂತೆ ಒಟ್ಟು 9 ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಆಯಾ ಭಾಗದ ಕಾರ್ಪೊರೇಟರ್ ಗಳು ಜವಾಬ್ದಾರಿ ತೆಗೆದುಕೊಂಡು ಸ್ವಚ್ಛತೆ ಇತ್ಯಾದಿ ಕಾರ್ಯಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.
ಜಿಪಂ ಸಿಇಒ ಎಂ.ಎಲ್.ವೈಶಾಲಿ, ಎಸ್ಪಿ ಲಕ್ಷ್ಮೀಪ್ರಸಾದ್, ಡಿಸಿ‌ ಕೆ.ಬಿ.ಶಿವಕುಮಾರ್ ಉಪಸ್ಥಿತರಿದ್ದರು.

https://www.suddikanaja.com/2021/05/10/tight-police-security-in-shivamogga/

error: Content is protected !!