ಭದ್ರಾವತಿಯ ಈ ಗ್ರಾಮದಲ್ಲಿ ನಡೀತು ಕೋವಿಡ್ ಪಥ ಸಂಚಲನ!

 

 

ಸುದ್ದಿ ಕಣಜ.ಕಾಂ
ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲಿಗೆರೆ ಗ್ರಾಮದಲ್ಲಿ ಬುಧವಾರ ಟಾಸ್ಕ್ ಫೋರ್ಸ್ ಸಮಿತಿ ವತಿಯಿಂದ ಪಥ ಸಂಚಲನ ಮಾಡಲಾಯಿತು.

READ | ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಕೊರೊನಾ ಆರ್ಭಟ, ಇನ್ನುಳಿದ ಕಡೆ ರಿಲೀಫ್

ಕೋವಿಡ್ 19 ಬಗ್ಗೆ ಜಾಗೃತಿ ಮೂಡಿಸಲು ಎಲ್ಲ ಇಲಾಖೆಗಳ ಸಹಯೋಗದಲ್ಲಿ ಮೈಕ್ ಮೂಲಕ ಪ್ರಚಾರ ಮಾಡಿ ಪಥ ಸಂಚಲನ ನಡೆಸಿ ಜನಜಾಗೃತಿ ಮೂಡಿಸಲಾಯಿತು.
ತಾಲ್ಲೂಕು ಆರೋಗ್ಯ ಅಧಿಕಾರಿ ಅಶೋಕ್, ಉಪ ತಹಸೀಲ್ದಾರ್ ನಾರಾಯಣ ಗೌಡ್ರು, ರಾಜಸ್ವ ನಿರೀಕ್ಷಕ ಜಗದೀಶ್, ಗ್ರಾಮ ಲೆಕ್ಕಾಧಿಕಾರಿ ಜ್ಞಾನೇಶ್ವರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್, ಗ್ರಾಮ ಪಂಚಾಯಿತಿ ಸದಸ್ಯ ಆರ್.ಎನ್.ರುದ್ರೇಶ್, ಸ್ವಾಮಿನಾಥನ್, ಎಸ್.ಡಿ.ಎಂ.ಸಿ ಅಧ್ಯಕ್ಷ ವೀರಪ್ಪನ್, ಪೊಲೀಸ್ ಇಲಾಖೆಯ ಜಗದೀಶ್, ಆರೋಗ್ಯ ಇಲಾಖೆಯ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!