ಭದ್ರಾವತಿ, ಶಿವಮೊಗ್ಗದ ಕೊರೊನಾ ಸೋಂಕಿತರ ಮನೆಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕಿತರಿಂದ ಜನ ಮಾರುದ್ದ ಓಡುತ್ತಿರುವಾಗ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ ಅವರು ಶನಿವಾರ ಜಿಲ್ಲೆಯ ವಿವಿಧೆಡೆ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು.

READ | ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಿಲ್ಲ ಬ್ರೇಕ್, ಡೆಡ್‍ಲೈನ್‍ನಲ್ಲೇ ಮುಗಿಯಲಿದೆ ಕೆಲಸ

ತಾಲ್ಲೂಕಿನ ಸಂತೇಕಡೂರು, ಕೊರಲಹಳ್ಳಿ, ಭದ್ರಾವತಿ ತಾಲ್ಲೂಕಿನ ತಾವರಘಟ್ಟ, ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ ಮತ್ತು ಗ್ರಾ.ಪಂ ಸಿಬ್ಬಂದಿ ಜೊತೆ ಕೋವಿಡ್ ಪಾಸಿಟಿವ್ ಬಂದಿರುವ ರೋಗಿಗಳ ಮನೆಗಳಿಗೆ ಭೇಟಿ ನೀಡಿದರು.

ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಯಾವುದಾದರೂ ಸಮಸ್ಯೆಗಳಿದ್ದರೆ ತಿಳಿಸುವಂತೆ ಮನವಿ ಮಾಡಿದರು. ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬಿದರು.

error: Content is protected !!