ಶಿವಮೊಗ್ಗದಲ್ಲಿ ಭದ್ರಾವತಿ ಮೂಲದ ‘ಆಕ್ಸಿಜನ್ ಮ್ಯಾನ್’ ಹವಾ, ಬಡವರ ಕಷ್ಟಕ್ಕೆ ಮಿಡಿದ ಹೃದಯ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ದೆಹಲಿಯಲ್ಲಿ ಸಂಕಷ್ಟದಲ್ಲಿರುವವರಿಗೆ ಕೃತಕ ಆಮ್ಲಜನಕ, ಊಟ, ಅಗತ್ಯ ಸೇವೆಗಳನ್ನು ನೀಡುವ ಮೂಲಕ ‘ಆಕ್ಸಿಜನ್ ಮ್ಯಾನ್’ ಎಂಬ ಖ್ಯಾತಿಗೆ ಪಾತ್ರವಾಗಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಶಿವಮೊಗ್ಗಕ್ಕೆ ಭೇಟಿ ನೀಡಿದರು.

https://www.suddikanaja.com/2021/05/11/wrestler-srinivas-died-due-to-corona/

ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿರುವ ಶ್ರೀನಿವಾಸ್ ಅವರು ಶುಕ್ರವಾರ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ತ್ಯಾವರೆಕೊಪ್ಪ ಸಮೀಪದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಐಸೋಲೇಷನ್ ಕಿಟ್ ವಿತರಣೆ ಮಾಡಿದರು.
ಹರ್ಷ ದಿ ಫರ್ನ್ ಹೋಟೆಲ್ ಹಿಂಭಾಗದಲ್ಲಿರುವ ಅಲೆಮಾರಿ ಸಮುದಾಯದ ನಿವಾಸಿಗಳಿಗೆ ಆಹಾರ ಕಿಟ್ ವಿತರಣೆ ಮಾಡಿದರು. ಪುನರ್ವಸತಿ ಕೇಂದ್ರದ 250ಕ್ಕೂ ಹೆಚ್ಚು ನಿವಾಸಿಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ರೋಗ ನಿರೋಧಕ ಶಕ್ತಿವರ್ಧಕ ಕಿಟ್‍ಗಳನ್ನು ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಶ್ರೀನಿವಾಸ್, ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವುದು ಕಾಂಗ್ರೆಸ್ ಸಂಸ್ಕøತಿಯಾಗಿದೆ. ಕಳೆದ ವರ್ಷ ಲಾಕ್‍ಡೌನ್ ಜಾರಿ ಆದ ಕ್ಷಣದಿಂದ ನಿರಂತರ ಕಾಂಗ್ರೆಸ್ ಕೆಲಸ ಮಾಡುತ್ತಿದೆ. 2ನೇ ಅಲೆಯ ಮುನ್ಸೂಚನೆ ನೀಡಿದ್ದೇ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಿರ್ದೇಶನದಂತೆ ಸೋಂಕಿತರಿಗೆ ಬೆಡ್, ಆಕ್ಸಿಜೆನ್, ನಿರ್ಗತಿಕರಿಗೆ, ಬಡವರಿಗೆ ಆಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯದರ್ಶಿ ಡಿ.ಎಂ. ಸಂದೀಪ್, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್, ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ. ಯೋಗೇಶ್, ವಿರೋಧ ಪಕ್ಷ ನಾಯಕಿ ಯಮುನಾ ರಂಗೇಗೌಡ, ಸಿ.ಜಿ. ಮಧುಸೂದನ್, ಕೆ. ಚೇತನ್, ಗಣೇಶ್, ಮೊಹಮ್ಮದ್ ನಿಹಾಲ್, ಆದರ್ಶ ಹುಂಚನಕಟ್ಟೆ, ಪ್ರದೀಪ್, ವಿನಾಯಕ್ ಉಪಸ್ಥಿತರಿದ್ದರು.

https://www.suddikanaja.com/2020/12/27/open-heart-surgery-in-narayana-hrudayalaya-shivamogga/

error: Content is protected !!