GOOD NEWS | ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಗ್ರೀನ್ ಸಿಗ್ನಲ್, ಸ್ಥಳೀಯರಿಗೆಷ್ಟು ಸೀಟು ಲಭ್ಯ ಗೊತ್ತಾ?

 

 

ಸುದ್ದಿ ಕಣಜ.ಕಾಂ

ಶಿವಮೊಗ್ಗ: ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

https://www.suddikanaja.com/2021/01/18/new-kendriya-vidyalaya-start-in-shivamogga/

ಭದ್ರಾವತಿಯ ರ್ಯಾಪಿಡ್ ಆಕ್ಷನ್ ಫೋರ್ಸ್ ಬೆಟಾಲಿಯನ್ ಹತ್ತಿರ ಕೇಂದ್ರೀಯ ವಿದ್ಯಾಲಯ ಸ್ಥಾಪನೆಯಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಶಿವಮೊಗ್ಗ ಜನತೆಯ ಪರವಾಗಿ ಇವರುಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಕೇಂದ್ರೀಯ ವಿದ್ಯಾಲಯದಲ್ಲಿ ಶೇ.15 ಸೀಟುಗಳನ್ನು ರ್ಯಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿ ಮಕ್ಕಳಿಗೆ ನೀಡಲಿದ್ದು, ಉಳಿಕೆ ಶೇ.85 ಸೀಟ್ ಗಳು ಸ್ಥಳೀಯರಿಗೆ ಕೇಂದ್ರೀಯ ವಿದ್ಯಾಲಯ ಮಾರ್ಗಸೂಚಿಯಂತೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.

https://www.suddikanaja.com/2021/05/28/shivamogga-all-areas-will-get-drinking-water/

error: Content is protected !!