ಮಠದಲ್ಲಿ ಸೇವಕರನ್ನು ಇಟ್ಟುಕೊಳ್ಳದೇ ಕೈಯ್ಯಾರೆ ಅನ್ನದಾಸೋಹ ಮಾಡುತ್ತಿದ್ದ ಕವಲೇದುರ್ಗ ಶ್ರೀ ಕೊರೊನಾದಿಂದ‌ ಸಾವು, ಸಿಎಂ ಸಂತಾಪ

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾ ಸ್ವಾಮಿಗಳವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಧ್ಯಯನ ಶೀಲರು, ಸ್ನೇಹ ಜೀವಿಗಳಾಗಿದ್ದ ಶ್ರೀಗಳು, ಮಠದಲ್ಲಿ ಯಾವ ಸೇವಕರನ್ನೂ ಇಟ್ಟುಕೊಳ್ಳದೆ, ಮಠಕ್ಕೆ ಬಂದ ಭಕ್ತರಿಗೆ ಕೈಯ್ಯಾರೆ ದಾಸೋಹವನ್ನು ಮಾಡಿ ಬಡಿಸುತ್ತಿದ್ದರು. ಮಠದ ಅಭಿವೃದ್ಧಿ ಮತ್ತು ಕೆಳದಿ ಸಂಸ್ಥಾನದ ಇತಿಹಾಸದ ಬಗ್ಗೆ ಅಪಾರ ಕಾಳಜಿ ಹೊಂದಿ ಕ್ರಿಯಾಶೀಲರಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಭಗವಂತನು ಶ್ರೀಗಳಿಗೆ ಸದ್ಗತಿಯನ್ನು ಕರುಣಿಸಲಿ ಹಾಗೂ ಶಿಷ್ಯವೃಂದಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

error: Content is protected !!