ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಬೆಳಗ್ಗೆ 6ರಿಂದ 8 ಗಂಟೆಯವರೆಗೆ ಮಾತ್ರ ವಸ್ತುಗಳ ಖರೀದಿಗೆ ಅವಕಾಶ ನೀಡಿತ್ತು. ಆದರೆ, ತಾಳಗುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ.
ರಿಲ್ಯಾಕ್ಸ್ ಅವಧಿಯನ್ನು ಬೆಳಗ್ಗೆ 6ರಿಂದ 10 ಗಂಟೆಯವರೆಗೆ ವಿಸ್ತರಿಸಲಾಗಿದೆ. ವಹಿವಾಟಿ ಅನುಕೂಲವಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ಈ ವೇಳೆ ಅನಗತ್ಯ ಓಡಾಟಕ್ಕೆ ಅವಕಾಶ ಇರುವುದಿಲ್ಲ. ಅಗತ್ಯ ವಸ್ತುಗಳು, ಮದ್ಯದಂಗಡಿ, ತರಕಾರಿ ಅಂಗಡಿಗಳು ಈ ವೇಳೆ ತೆರೆದಿರಲಿವೆ.