ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದೆ. ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ತುಂಗೆ ಮೈದುಂಬಿ ಹರಿಯುತ್ತಿದ್ದಾಳೆ. ಇದರಿಂದಾಗಿ, ತುಂಗೆಗೆ ಅಡ್ಡಲಾಗಿ ಕಟ್ಟಲಾಗಿರುವ ಗಾಜನೂರು ಜಲಾಶಯ ಭರ್ತಿಯಾಗಿದ್ದು, ಸೋಮವಾರ ಡ್ಯಾಮ್ ನ 21 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರನ್ನು ನದಿಗೆ ಬಿಡಲಾಗುತ್ತಿದೆ.
VIDEO REPORT
ಮಧ್ಯಾಹ್ನ 2.30ರ ನಂತರ ಒಟ್ಟು 9,500 ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರ ಹರಿಸಲಾಗುತ್ತಿದೆ.
ಗಾಜನೂರು ಜಲಾಶಯದ 22 ಗೇಟ್ ಗಳಲ್ಲಿ 21 ಕ್ರಸ್ಟ್ ಗೇಟ್ ಗಳನ್ನು ಮೇಲೆತ್ತಲಾಗಿದೆ.
ಶೃಂಗೇರಿ, ತೀರ್ಥಹಳ್ಳಿ ಭಾಗದಲ್ಲಿ ಮಳೆ ಮುಂದುವರಿದರೆ ಹೆಚ್ಚಿನ ನೀರು ಜಲಾಶಯ ಹರಿದು ಬರಲಿದ್ದು, ಪ್ರಸ್ತುತ 3,774 ಕ್ಯೂಸೆಕ್ಸ್ ಒಳಹರಿವು ಇದೆ.