ಲ್ಯಾಬ್ ಟೆಕ್ನಿಷಿಯನ್ ಹುದ್ದೆ ತಾತ್ಕಾಲಿಕ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಪ್ರಯೋಗ ಶಾಲೆ ತಂತ್ರಜ್ಞರ ಹುದ್ದೆ ಆಯ್ಕೆಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 23ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

READ | ಹೆಚ್ಚಿದ ಮಳೆಯ ಆರ್ಭಟ, ಅತಿವೃಷ್ಟಿ ಅಪಾಯದಲ್ಲಿ ಶಿವಮೊಗ್ಗದ 163 ಗ್ರಾಮ, 74 ಪ್ರದೇಶಗಳು, ಸಿಎಂ ಯಡಿಯೂರಪ್ಪ ನೀಡಿದ ಸೂಚನೆಗಳೇನು?

ಜೂನ್ 11ರಂದು ಏರ್ಪಡಿಸಿದ್ದ ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ತಾತ್ಕಾಲಿಕ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅಭ್ಯರ್ಥಿಗಳು ಸಲ್ಲಿಸುವಂತೆ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!