ಕೋವಿಡ್ ಮಧ್ಯೆ ಶಿವಮೊಗ್ಗಕ್ಕೆ ಮಳೆ ಚಾಲೆಂಜ್, ಅತಿವೃಷ್ಟಿ ನಿಭಾಯಿಸಲು ಸಿದ್ಧತೆಗಳೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ವೈರಸ್ ಸೋಂಕಿನಿಂದ ಈಗಾಗಲೇ ಜನ ಬಸವಳಿದಿದ್ದಾರೆ. ಅದರ ಮಧ್ಯೆ ಮಳೆಯ ಆರ್ಭಟ ಶುರುವಾಗಿದೆ. ಒಂದುವೇಳೆ, ವರ್ಷಧಾರೆ ಇದೇ ರೀತಿ ಮುಂದುವರಿದರೆ ಜಿಲ್ಲೆಯ ಹಲವೆಡೆ ಪ್ರವಾಹ ಸೃಷ್ಟಿಯಾಗುವ ಸಾಧ್ಯತೆ ಇದೆ.

https://www.suddikanaja.com/2021/06/19/cm-vc-on-rain-preparation/

ಈ ಕುರಿತು ಶನಿವಾರ ಮಾತನಾಡಿರುವ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪ್ರವಾಹ ಪೀಡಿತ ಗ್ರಾಮಗಳನ್ನು ಗುರುತಿಸಿ, ಪ್ರವಾಹ ಪರಿಸ್ಥಿತಿ ಎದುರಿಸಲು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜನ, ಜಾನುವಾರುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಇದರೊಂದಿಗೆ ಕೋವಿಡ್ 19 ಸೋಂಕಿನ ಕುರಿತು ಸಹ ಎಚ್ಚರಿಕೆ ವಹಿಸಬೇಕಿದೆ ಎಂದು ತಿಳಿಸಿದರು.
ಜಿಲ್ಲೆ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಸಹಾಯವಾಣಿ ಸ್ಥಾಪನೆ, ದೂರವಾಣಿ ಮತ್ತಿತರ ಸಂಪರ್ಕ ಸಾಧನಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು. ತುರ್ತು ನಿರ್ವಹಣೆಗೆ ಬೇಕಾದ ಸಾಮಗ್ರಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಖರೀದಿಸಲು ಕ್ರಮ ಕೈಗೊಳ್ಳುವುದು ಎಂದು ಹೇಳಿದರು.
ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆ, ಅವರಿಗೆ ಅಗತ್ಯ ಮೂಲಸೌಕರ್ಯಗಳುಳ್ಳ ಕಾಳಜಿ ಕೇಂದ್ರಗಳು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವುದು ಅತಿ ಅಗತ್ಯವಾಗಿದೆ. ಪ್ರವಾಹ ನಿರ್ವಹಣೆಗಾಗಿ ಸ್ಥಳೀಯ ಸಂಪನ್ಮೂಲಗಳ ಸದ್ಬಳಕೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳು, ಸ್ವಯಂ ಸೇವಕರ ಸಹಕಾರವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರವಾಹದ ಪರಿಣಾಮ ಅತ್ಯಂತ ಕಡಿಮೆ ಆಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಯಿತು.
ಪ್ರವಾಹದ ಹಿನ್ನೆಲೆಯಲ್ಲಿ ಸ್ಥಳಾಂತರಿಸಿದ ಕೆಲವು ಗ್ರಾಮಗಳಿಗೆ ಗ್ರಾಮಸ್ಥರು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಈ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಿ, ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

https://www.suddikanaja.com/2021/02/02/preparation-to-catch-wild-tusker-in-umblebailu-forest/

error: Content is protected !!