ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯ ಇನ್ನುಳಿದ ತಾಲೂಕುಗಳಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದೆ. ಹೀಗಾಗಿ, ಅವುಗಳ ಹೊರತಾಗಿ ಶಿವಮೊಗ್ಗ ಮತ್ತು ಭದ್ರಾವತಿಗೆ ಮಾತ್ರ ಅನ್ವಯವಾಗುವಂತೆ ಕೆಲವೊಂದು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
⇒ ಯಾವೆಲ್ಲ ವ್ಯಾಪಾರಕ್ಕೆ ಅವಕಾಶ, ಸಮಯವೇನು? ಪೂರ್ಣ ಮಾಹಿತಿಗಾಗಿ ವಿಡಿಯೋ ಲಿಂಕ್ ಮೇಲೆ ಮಾಡಿ
ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ವ್ಯಾಪಾರಸ್ಥರೊಂದಿಗಿನ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ, ಭದ್ರಾವತಿಯಲ್ಲಿ ಸೋಂಕು ಅಧಿಕ ಸಂಖ್ಯೆಯಲ್ಲಿವೆ. ಇದನ್ನು ನಿಯಂತ್ರಿಸುವುದಕ್ಕಾಗಿ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.