ಭೂ ಮಂಜೂರಾತಿಗಾಗಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪಿಗಳು ಅರೆಸ್ಟ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಂಜೂರು ಆಗಿರುವ ಭೂಮಿ ಅಕ್ರಮವಾಗಿದ್ದು, ಹಣ ನೀಡದಿದ್ದರೆ ನ್ಯಾಯಾಲಯಕ್ಕೆ ದೂರು ನೀಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ.

ಮಲ್ಲಂದೂರು ಗ್ರಾಮದ ಷಣ್ಮುಖ ಎಂಬುವವರಿಗೆ ಕರೆ ಮಾಡಿ 10 ಲಕ್ಷ ರೂಪಾಯಿ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಲಾಗುತಿತ್ತು. ಇದರಿಂದ ಬೇಸತ್ತು ಪೊಲೀಸರು ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ದಿನೇಶ್, ಯೋಗೇಂದ್ರ, ಮುರುಳಿ ಎಂಬುವವರನ್ನು ಬಂಧಿಸಲಾಗಿದೆ. 10 ಲಕ್ಷ ರೂಪಾಯಿ ನೀಡದಿದ್ದರೆ ನ್ಯಾಯಾಲಯಕ್ಕೆ ಹೋಗಿ ಭೂ ಮಂಜೂರಾತಿ ರದ್ದುಪಡಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!