ಲಿಂಗತ್ವ ಅಲ್ಪಸಂಖ್ಯಾತರಿಗೆ ಗೃಹ ಭಾಗ್ಯ, ಶಿವಮೊಗ್ಗದಲ್ಲಿ‌ ಇದಕ್ಕಾಗಿ ಐದು ಎಕರೆ‌ ನೀಡಲು ಗ್ರೀನ್ ಸಿಗ್ನಲ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರಿಗೆ ಶಿವಮೊಗ್ಗದಲ್ಲಿ ಐದು ಎಕರೆ ಜಾಗದಲ್ಲಿ ವಸತಿ ನಿರ್ಮಿಸಿ ಕೊಡಲಾಗುವುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶಶಿಕಲಾ ವಿ.ಟೆಂಗಳಿ‌ ಹೇಳಿದರು.

https://www.suddikanaja.com/2021/05/17/covid-3rd-wave/

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳ ಕುರಿತು‌ಬಿಧವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿಗಮದಿಂದ ಪ್ರತಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ದಮನಿತರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಮನೆಗಳನ್ನು ಕಟ್ಟಿಕೊಳ್ಳಲು ಜಾಗ ನೀಡುವಂತೆ ಮನವಿ ಮಾಡಿದ್ದೇನೆ. ಶಿವಮೊಗ್ಗದ ಜಿಲ್ಲಾಧಿಕಾರಿಗಳು ಸಕಾರಾತ್ಮಕ‌ಸ್ಪಂದನೆ ನೀಡಿದ್ದು, 5 ಎಕರೆ ಜಾಗ ನೀಡಲು ಒಪ್ಪಿದ್ದಾರೆ ಎಂದರು.
ನಗರದಲ್ಲಿ 300 ದಮನಿತ ಮಹಿಳೆಯರು ಮತ್ತು 600 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಇವರು ಸ್ವಾವಲಂಬಿಗಳಾಗಿ ಮತ್ತು ಗೌರವಯುತವಾಗಿ ಜೀವಿಸಲು ಸರ್ಕಾರ ಅನೇಕ ಯೋಜನೆ ನೀಡಿದೆ ಎಂದು ಹೇಳಿದರು.
ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರಿಗೆ ಸಾಲ ಸೌಲಭ್ಯ ಪ್ರಮಾಣ ಪತ್ರ ವಿತರಿಸಿದರು.
ಜಿಪಂ ಸಿಇಒ ಎಂ.ಎಲ್.ವೈಶಾಲಿ, ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಜಿ.ಸುರೇಶ್, ಲೀಡ್ ಬ್ಯಾಂಕ್ ಮ್ಯಾನೇಜರ್ ಎಂ.ಡಿ. ಯತೀಶ್ ಉಪಸ್ಥಿತರಿದ್ದರು.

https://www.suddikanaja.com/2021/01/12/raf-platoon-in-bhadravathi/

error: Content is protected !!