ಹೇಗಿರಲಿವೆ ಎಸ್.ಎಸ್.ಎಲ್.ಸಿ ಪರೀಕ್ಷಾ ಕೊಠಡಿಗಳು, ಏನೇನು ವ್ಯವಸ್ಥೆ ಲಭ್ಯ? ಪರೀಕ್ಷೆಗೆ ಬರುವ ಮುನ್ನ ಇದನ್ನು ಓದಿ

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ನೂತನವಾಗಿ ಬಹು ಆಯ್ಕೆ ಮಾದರಿಯಂತೆ ಜುಲೈ 19 ಮತ್ತು 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದಂತೆ ಯಶಸ್ವಿಯಾಗಿ ನಡೆಸಲು ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಎಂ.ಎಲ್.ವೈಶಾಲಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕುರಿತಾದ ಪೂರ್ವ ಸಿದ್ದತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

https://www.suddikanaja.com/2021/01/20/education-minister-suresh-kumar-discussion-in-shivamogga/

ಕಳೆದ ಬಾರಿಯೂ ಕೋವಿಡ್ ಹಿನ್ನೆಲೆಯಲ್ಲಿ ಎಸ್‍.ಎಸ್‍.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಬಾರಿಯೂ ಲೋಪರಹಿತವಾಗಿ ನಡೆಸಲಾಗುವುದು. ಮಕ್ಕಳು ನಿರಾತಂಕವಾಗಿ ಪರೀಕ್ಷೆ ಬರೆಯುವಂತಹ ವಾತಾವರಣ ನಿರ್ಮಿಸಲು ಎಲ್ಲ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷಾ ಮಂಡಳಿ ಮಾರ್ಗಸೂಚಿ ಅನ್ವಯ, ಪ್ರತಿ ತಾಲ್ಲೂಕುವಾರು ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 150 ಪರೀಕ್ಷೆ ಕೇಂದ್ರಗಳನ್ನು ಗುರುತಿಸಲಾಗಿದೆ. ಮಂಡಳಿಯಿಂದ ನೀಡಲಾದ ಎಸ್.ಓ.ಪಿ ಅನುಸಾರ ಪರೀಕ್ಷಾ ಕೇಂದ್ರಗಳಲ್ಲಿ ಆಸನ ವ್ಯವಸ್ಥೆ, ವಿಶೇಷ ಕೊಠಡಿಗಳು, ಆರೋಗ್ಯ ತಪಾಸಣಾ ಕೌಂಟರ್‍ಗಳನ್ನು ತೆರೆಯಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

https://www.suddikanaja.com/2020/12/21/iti-exam-will-be-conduct-by-kea-cn-ashwath-narayan-said/

ಹೇಗಿರಲಿ ಪರೀಕ್ಷಾ ಕೊಠಡಿ | ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್ ಮತ್ತು ಪ್ರಥಮ ಚಿಕಿತ್ಸಾ ಪೆಟ್ಟಿ ಹಾಗೂ ಆರೋಗ್ಯ ತಪಾಸಣಾ ಕೌಂಟರ್ ವ್ಯವಸ್ಥೆ ಇರಲಿದೆ.
ಜೊತೆಗೆ, ಪ್ರತಿ ಪರೀಕ್ಷಾ ಕೇಂದ್ರ, ಪೀಠೋಪಕರಣಗಳನ್ನು ಪರೀಕ್ಷೆಯ ಮುನ್ನ ಮತ್ತು ನಂತರ ಸೋಂಕು ನಿವಾರಕ ದ್ರಾವಣದಿಂದ ಶುದ್ದಗೊಳಿಸಲಾಗುವುದು. ಪರೀಕ್ಷಾ ಕೇಂದ್ರದ ಪ್ರವೇಶದಲ್ಲೇ ಆರೋಗ್ಯ ತಪಾಸಣಾ ಕೌಂಟರ್ ಸ್ಥಾಪಿಸಲಾಗುವುದು. ಇದು ಬೆಳಗ್ಗೆ 8.30 ರಿಂದ ತೆರೆದಿದ್ದು ವೈದ್ಯಕೀಯ, ಆಶಾ ಕಾರ್ಯಕರ್ತೆಯರು ತಪಾಸಣೆ ನಡೆಸುವರು.
ಕೇಂದ್ರದೊಳಗೆ ಪ್ರವೇಶಿಸುವ ಪ್ರದೇಶದಲ್ಲಿ ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಆರು ಅಡಿ ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಅದಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು.
ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಯಂತೆ ಒಂದು ಕೊಠಡಿಯಲ್ಲಿ ಗರಿಷ್ಠ 12 ಮಕ್ಕಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುವುದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಾಲ್ಲೂಕು ಕೇಂದ್ರಕ್ಕೆ ಹೋಗದಂತೆ ಪರೀಕ್ಷಾ ಕೇಂದ್ರ ರಚಿಸಲಾಗುವುದು‌
ವಿದ್ಯಾರ್ಥಿಗಳು ಮನೆಯಿಂದ ನೀರಿನ ಬಾಟಲಿ, ಆಹಾರದ ಡಬ್ಬಿ ತರುವ ಅವಕಾಶವಿದೆ. ಕೇಂದ್ರಕ್ಕೆ ಬರಲು ಸಾರಿಗೆ ಸಂಪರ್ಕ ತೊಂದರೆ ಇರುವ ಮಕ್ಕಳನ್ನು ಗುರುತಿಸಿ ಕರೆ ತರಲು ವ್ಯವಸ್ಥೆ ಮಾಡುವಂತೆ ಬಿಇಓಗಳಿಗೆ ಸೂಚನೆ ನೀಡಲಾಗಿದೆ.

  1. ಕೆಮ್ಮು, ನೆಗಡಿ, ಜ್ವರ ಮೊದಲಾದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಕನಿಷ್ಠ ಎರಡು ಕೊಠಡಿಗಳನ್ನು ವಿಶೇಷ ಕೊಠಡಿಗಳೆಂದು ಕಾಯ್ದಿರಿಸಲಾಗುವುದು.
  2. ಆಕ್ಸಿಜನ್ ಸ್ಯಾಚುರೇಷನ್ ಮಟ್ಟ ಶೇ.94 ಗಿಂತ ಕಡಿಮೆ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಮುಂದಿನ ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗುವುದು.
  3. ಕೆಮ್ಮು ನೆಗಡಿ, ಜ್ವರ ಇದ್ದು ಆಕ್ಸಿಜನ್ ಸ್ಯಾಚುರೇಷನ್ ಶೇ.94 ಕ್ಕಿಂತ ಕಡಿಮೆ ಇದ್ದಲ್ಲಿ ‘ವಿಶೇಷ ಕೊಠಡಿ’ಯಲ್ಲಿ ಕೂರಿಸಿ ಪರೀಕ್ಷೆ ನಡೆಸಲಾಗುವುದು.
  4. ವಿದ್ಯಾರ್ಥಿ ಈಗಾಗಲೇ ಕೋವಿಡ್ ಪಾಸಿಟಿವ್ ಇದ್ದು ಗೈರಾದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ನೀಡಿ ಅದನ್ನು ಪ್ರಥಮ ಅವಕಾಶವೆಂದು ಪರಿಗಣಿಸಲಾಗುವುದು.
  5. ಪರೀಕ್ಷಾ ಮೇಲ್ವಿಚಾರಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್‍ ಶೀಲ್ಡ್ ಹಾಕಿಕೊಳ್ಳಬೇಕು.
  6. ಮಕ್ಕಳಿಗೆ ನೀರು ಕುಡಿಯುವಲು ಬಳಸಿ ಬಿಸಾಡಬಹುದಾದ ಲೋಟದ ವ್ಯವಸ್ಥೆ ಮಾಡಬೇಕು. ಶೌಚಾಲಯಲ್ಲಿ ಲಿಕ್ವಿಡ್ ಸೋಪ್ ಇಡಬೇಕು.

ಡಿಎಚ್.ಒ ಡಾ.ರಾಜೇಶ್ ಸುರಗಿಹಳ್ಳಿ, ಡಿಡಿಪಿಐ ಎನ್.ಎಂ.ರಮೇಶ್, ಎಡಿಸಿ ಅನುರಾಧ, ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ, ಡಯಟ್ ಪ್ರಾಚಾರ್ಯ ಬಸವರಾಜಪ್ಪ, ಜಿಲ್ಲಾ ಖಜಾನಾಧಿಕಾರಿ ಎಚ್.ಎಸ್.ಸಾವಿತ್ರಿ, ಜಿಲ್ಲಾ ಶಿಕ್ಷಣಾಧಿಕಾರಿ ಹಾಗೂ ಎಸ್‍ಎಸ್‍ಎಲ್‍ಸಿ ನೋಡಲ್ ಅಧಿಕಾರಿ ಎಚ್.ಆರ್.ಕೃಷ್ಣಮೂರ್ತಿ ಇತರರು ಹಾಜರಿದ್ದರು.

https://www.suddikanaja.com/2020/11/07/sslc-tab/

error: Content is protected !!