ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಹೊಳೆಹಟ್ಟಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ಬುಧವಾರ ಮಧ್ಯಾಹ್ನ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಸಂಜೀವ್ ಕುಮಾರ್, ಎ.ಎಸ್.ಐ ವಿಜಯ್, ಸಿಬ್ಬಂದಿ ಜಯಪ್ಪ, ಜಗದೀಶ್ ದಾಳಿ ನಡೆಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.