ಬೆಳ್ಳಂಬೆಳಗ್ಗೆ ಎಸಿಬಿ ಶಾಕ್, ಯೋಜನಾಧಿಕಾರಿಯ ಮನೆಗಳಿರುವ ಎಂಟು ಕಡೆ ದಾಳಿ, ದಾಖಲೆ ಪರಿಶೀಲನೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆದಾಯ ಮೀರಿ ಆಸ್ತಿ ಹೊಂದಿದ್ದಾರೆ ಎನ್ನಲಾದ ಕೋಲಾರ ನಗರಸಭೆ ಯೋಜನಾಧಿಕಾರಿಯ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಸರಣಿ ಎಸಿಬಿ ದಾಳಿ ನಡೆದಿದೆ.

ಯೋಜನಾಧಿಕಾರಿ ಕೃಷ್ಣಪ್ಪ ಎಂಬುವವರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಸಿಬ್ಬಂದಿ ವಿವಿಧ ತಂಡಗಳಾಗಿ ಒಟ್ಟು ಎಂಟು ಕಡೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ಕಲ್ಲಹಳ್ಳಿಯ ಶಿವಪ್ಪ ನಾಯಕ ಬಡಾವಣೆಯಲ್ಲಿರುವ ಕೃಷ್ಣಪ್ಪ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಅದೇ ರೀತಿ, ಕೋಲಾರದ ಮಾಲೂರು, ಚನ್ನಗಿರಿ, ಬೆಂಗಳೂರಿನಲ್ಲಿರುವ ಇವರ ಮನೆಯ ಮೇಲೆ ದಾಳಿ ಮಾಡಲಾಗಿದೆ.

ಪ್ರಸ್ತುತ ಶಿವಮೊಗ್ಗದಲ್ಲಿರುವ ಮನೆಯನ್ನು ಬಾಡಿಗೆಗೆ ನೀಡಲಾಗಿದ್ದು, ಕೋಲಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇರೆಗೆ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

error: Content is protected !!