ಭದ್ರಾ ಎಡ, ಬಲ‌ ದಂಡೆಗೆ ನೀರು ಬಿಡಲು ಡೇಟ್ ಫಿಕ್ಸ್, ಸಂಘರ್ಷಕ್ಕೆ‌ ತಾತ್ಕಾಲಿಕ‌ ರಿಲೀಫ್

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಭದ್ರಾ ಜಲಾಶಯದಿಂದ‌ ಮುಂಗಾರು ಹಂಗಾಮು ಬೆಳೆಗಳಿಗೆ ಬಲ ಮತ್ತು ಎಡ ದಂಡೆ ಕಾಲುವೆಗಳು ಹಾಗೂ ಶಾಖಾ ನಾಲೆಗಳಿಗೆ ನೀರು ಬಿಡುವುದಾಗಿ ಭದ್ರಾ ಕಾಡಾ‌‌‌ ಅಧ್ಯಕ್ಷೆ ಪವಿತ್ರ ರಾಮಯ್ಯ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸುವ ಕುರಿತು ಆದ ಆದೇಶ ಹಾಗೂ ಜಲಾಶಯದಲ್ಲಿ ನೀರಿನ ಪ್ರಮಾಣದ ಬಗ್ಗೆ ಎಂ.ಪಿ, ಎಂಎಲ್‍ಎಯವರ ಗಮನಕ್ಕೆ ತಂದಿದ್ದೇನೆ. ಮುಖ್ಯಮಂತ್ರಿಗಳ ಮೇಲೆ ರಾಜಕೀಯ ಒತ್ತಡ ತಂದು ಹೀಗೆ ಆದೇಶ ಮಾಡಿಸಲಾಗಿದೆ. ಆದಾಗ್ಯೂ ನಾನು ಪ್ರಸ್ತುತ ಜಲಾಶಯದ ನೀರಿನ ಪರಿಸ್ಥಿತಿ ಬಗ್ಗೆ ವಿವರಿಸಿ ಭದ್ರಾ ಮೇಲ್ದಂಡೆಗೆ ನೀರು ಹರಿಸಿದರೆ ಭದ್ರಾ ಅಚ್ಚುಕಟ್ಟುದಾರರಿಗೆ ನೀರಿನ ಕೊರತೆಯಾಗಲಿದ್ದು ಅವರು ಪ್ರತಿಭಟನೆ ಮಾಡುವ ಸಂಭವ ಇದೆ. ಆದ ಕಾರಣ ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸುತ್ತಿರುವುದನ್ನು ತಕ್ಷಣದಿಂದ ನಿಲ್ಲಿಸಬೇಕೆಂದು ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್‌ ಅವರಿಗೆ ಪತ್ರ ಬರೆದಿದ್ದೇನೆ.
ಪವಿತ್ರ ರಾಮಯ್ಯ, ಅಧ್ಯಕ್ಷರು, ಭದ್ರಾ ಕಾಡಾ

ಗುರುವಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆದ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ‌ ಜುಲೈ 23 ರ ಮಧ್ಯರಾತ್ರಿಯಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು ಎಂದು ಹೇಳಿದರು.
ನೀರಾವರಿ ಸಲಹಾ ಸಮಿತಿಯ ಸರ್ವ ಸದಸ್ಯರು ಹಾಗೂ ರೈತರೊಂದಿಗೆ ಚರ್ಚೆ ನಡೆಸಿ ಒಮ್ಮತದಿಂದ ಜುಲೈ 23 ರಿಂದ ಭದ್ರಾ ಬಲದಂಡೆ, ಎಡದಂಡೆ ನಾಲೆ, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾನಾಲೆಗಳಲ್ಲಿ ನೀರು ಹರಿಸಲು ನಿರ್ಧಾರ ಕೈಗೊಂಡಿದ್ದೇವೆ ಎಂದರು.

https://www.suddikanaja.com/2021/07/13/sslc-mock-exams-date-fixed/

ಬೇಡಿಕೆ ಇರುವ ನೀರೆಷ್ಟು‌ | ಜುಲೈ 14 ರಂದು ಜಲಾಶಯದಲ್ಲಿ 157 ಅಡಿ 4 ಇಂಚುಗಳಷ್ಟು ನೀರು ಸಂಗ್ರಹವಿದ್ದು, ಈ ಮಟ್ಟಕ್ಕೆ ನೀರಿನ ಸಂಗ್ರಹಣೆ 40.484 ಟಿಎಂಸಿ ಇದೆ. ಇದರಲ್ಲಿ 8.50 ಟಿ.ಎಂ.ಸಿ ಬಳಕೆಗೆ ಬಾರದ (ಡೆಡ್ ಸ್ಟೋರೇಜ್) ಪ್ರಮಾಣವಾಗಿದೆ.
26.652 ಟಿಎಂಸಿ ಬಳಕೆಗೆ ಬರುವ ನೀರಿನ ಪ್ರಮಾಣವಾಗಿದೆ. ಭದ್ರಾ ಬಲದಂಡೆ ಕಾಲುವೆಗೆ ಪ್ರತಿದಿನ ಸರಾಸರಿ 3050 ಕ್ಯೂಸೆಕ್ಸ್ ಮತ್ತು ಭದ್ರಾ ಎಡದಂಡೆ ಕಾಲುವೆಗೆ 490 ಒಟ್ಟು 3540 ಕ್ಯೂಸೆಕ್ಸ್ ಬೇಡಿಕೆ ಇದೆ‌ ಎಂದರು.

READ | ಒಂದೇ ಕ್ಲಿಕ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಇಂದಿನ ಎಲ್ಲ ಪ್ರಮುಖ ಸುದ್ದಿಗಳು

ಮುಂಗಾರು ಹಂಗಾಮಿಗೆ ಅವಶ್ಯವಿರುವ ನೀರಿನ ಪ್ರಮಾಣ | ಪ್ರಸ್ತುತ ಜಲಾಶಯದಲ್ಲಿ ಬಳಕೆಗೆ 26.652 ಟಿಎಂಸಿ ನೀರು ಲಭ್ಯವಿದ್ದು ಮುಂಗಾರು ಅವಧಿಗೆ 49.13 ಟಿಎಂಸಿ ನೀರು ಅವಶ್ಯಕತೆ ಇದೆ. ಕೊರತೆ ಇರುವ ನೀರಿನ ಪ್ರಮಾಣ 22.478 ಟಿಎಂಸಿ ಆಗಿದ್ದು ಈ ಪ್ರಮಾಣದ ಆಧಾರದಲ್ಲಿ ಚರ್ಚಿಸಿ‌ ನಿರ್ಧಾರ‌ಕೈಗೊಳ್ಳಲಾಗಿದೆ.
ಸದಸ್ಯ ಷಡಾಕ್ಷರಪ್ಪ, ತ್ಯಾವಣಿಗಿ ಉಪ ವಿಭಾಗದ ಸದಸ್ಯೆ ತೇಜಸ್ವಿ ಪಟೇಲ್ ಮಾತನಾಡಿದರು.
ಸಭೆಯಲ್ಲಿ ನೀರಾವರಿ ಸಲಹಾ ಸಮಿತಿ ಸದಸ್ಯರಾದ ರುದ್ರಮೂರ್ತಿ, ಎಚ್.ಆರ್.ಬಸವರಾಜಪ್ಪ, ಸದಾಶಿವಪ್ಪಗೌಡ, ರಾಜಪ್ಪ, ಹನುಮಂತಪ್ಪ, ದ್ಯಾಮಪ್ಪ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮುಖ್ಯ ಎಂಜಿನಿಯರ್ ಯತೀಶ್ಚಂದ್ರ, ಮುಖ್ಯ ಆಡಳಿತಾಧಿಕಾರಿ ಕೃಷ್ಣಮೂರ್ತಿ.ಬಿ.ಕುಲಕರ್ಣಿ, ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರ ಚಂದ್ರಹಾಸ್ ಉಪಸ್ಥಿತರಿದ್ದರು.

https://www.suddikanaja.com/2020/12/28/request-to-bhadra-cada-president-pavitra-ramaiah-to-provide-bhadra-left-canal-water/

 

error: Content is protected !!