ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗಾಂಧಿ ಜಯಂತಿಗೂ ಮುನ್ನ ಜಿಲ್ಲೆಯಲ್ಲಿ ಗೋ ಶಾಲೆಗೆ ಜಾಗ ಗುರುತಿಸಲಾಗುವುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಹೇಳಿದರು.
https://www.suddikanaja.com/2021/04/01/final-report-of-land-sliding-in-malendu-submitted-to-cm-yadiyurappa/
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪಶುಪಾಲನಾ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೋಶಾಲೆಗೆ ಜಾಗ ಗುರುತಿಸಿದ ಬಳಿಕ ಯೋಜನೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಾಣಿ ಕಲ್ಯಾಣ ಮಂಡಳಿಯ ಸಭೆಗಳನ್ನು ನಡೆಸುವಂತೆ ಹಾಗೂ ಇಲಾಖೆಯ ಇತರೆ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
https://www.suddikanaja.com/2021/07/02/covid-negative-report-mandatory-for-train-journey/
ಪ್ರಾಣಿಗಳ ರಕ್ಷಣೆ ಹಾಗೂ ಹಿಂಸೆ ತಡೆಯಲು ಕಾನೂನುಗಳನ್ನು ಇನ್ನಷ್ಟು ಬಿಗಿಗೊಳಿಸಲು ಸರ್ವೋಚ್ಚ ನ್ಯಾಯಾಲಯದ ಮಾರ್ಗದರ್ಶನದಂತೆ ಇಲಾಖಾ ಸಚಿವರು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ 28 ಸದಸ್ಯರ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪಿಸಲಾಗಿದೆ. ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.
ಎರವಲು ಸೇವೆಯಲ್ಲಿರುವವರು ವಾಪಸ್ | ಪಶು ಇಲಾಖೆಯಿಂದ ಅನ್ಯ ಇಲಾಖೆಗಳಿಗೆ ಎರವಲು ಸೇವೆಗಾಗಿ ಹೋಗಿರುವ ಎಲ್ಲ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗುವುದು. ಕಾರ್ಯನಿರ್ವಹಿಸದಿದ್ದರೆ ಅನಿವಾರ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಎಸ್.ಪಿ ಬಿ.ಎಂ.ಲಕ್ಷ್ಮೀಪ್ರಸಾದ್, ಅಪರ ಡಿಸಿ ಜಿ.ಅನುರಾಧ, ಪಶು ಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಶಿವಯೋಗಿ ಎಲಿ ಉಪಸ್ಥಿತರಿದ್ದರು.
https://www.suddikanaja.com/2021/07/13/sslc-exams-during-covid/