ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಆರು ಜನ ಕೊರೊನಾ‌ ಸೋಂಕಿತರು, ಅನಾರೋಗ್ಯ ಇದ್ದವರಿಗೆ ಪ್ರತ್ಯೇಕ ವ್ಯವಸ್ಥೆ, ದಾಖಲೆಯ ವಿದ್ಯಾರ್ಥಿಗಳು ಹಾಜರು

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ 150 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

https://www.suddikanaja.com/2021/02/12/rama-mandir-donation-by-students/

ಅನಾರೋಗ್ಯ ಕಾರಣದಿಂದ ಒಟ್ಟು 6 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಕು ಪ್ರತ್ಯೇಕ‌ ಕೊಠಡಿಯ ವ್ಯವಸ್ಥೆ ಮಾಡಲಾಗಿತ್ತು. ಕೋವಿಡ್ ಪಾಸಿಟಿವ್ ಇದ್ದ ಇಬ್ಬರು ವಿದ್ಯಾರ್ಥಿಗಳು ಕೋವಿಡ್ ಕೇರ್ ಸೆಂಟರ್‌ ಗಳಲ್ಲಿ ಪರೀಕ್ಷೆ ಬರೆದರು.
ದಾಖಲೆಯ ವಿದ್ಯಾರ್ಥಿಗಳು | ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಶೇ. 98.9 ವಿದ್ಯಾರ್ಥಿಗಳು ಹಾಗೂ ಸಮಾಜ ವಿಜ್ಞಾನ ವಿಷಯದಲ್ಲಿ ಶೇ.99 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

READ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ‌ ಬರುತ್ತವೆಂಬ ಭಯದಿಂದ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ, ಮುಂದೇನಾಯ್ತು?

ಗಣಿತ ವಿಷಯದಲ್ಲಿ ಒಟ್ಟು 24,004 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 23,762 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 87 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ವಿಜ್ಞಾನ ವಿಷಯದಲ್ಲಿ 23,774 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 23,536 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ. ಒಟ್ಟು 76 ವಿದ್ಯಾರ್ಥಿಗಳು ಗೈರಾಗಿರುತ್ತಾರೆ. ಸಮಾಜ ವಿಜ್ಞಾನ ವಿಷಯದಲ್ಲಿ 23,097 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 22,879 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 66 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ ಎಂದು ಡಿಡಿಪಿಐ ಎನ್.ಎಂ.ರಮೇಶ್ ತಿಳಿಸಿದ್ದಾರೆ.

https://www.suddikanaja.com/2021/04/26/old-students-stand-for-sahyadri-collage/

error: Content is protected !!