ಇನ್ಮುಂದೆ ಮನೆಯಲ್ಲಿದ್ದೇ ಲಕ್ಷಕ್ಕೂ ಹೆಚ್ಚು ಪುಸ್ತಕ ಓದಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಇನ್ಮುಂದೆ ಪುಸ್ತಕಗಳನ್ನು ಓದುವುದಕ್ಕೆ ಗ್ರಂಥಾಲಯಗಳಿಗೆ ಹೋಗುವ ಅಗತ್ಯವಿಲ್ಲ. ಕಾರಣ, ಸಾರ್ವಜನಿಕ ಗ್ರಂಥಾಲಯವು ವಿನೂತನ ಪ್ರಯೋಗಕ್ಕೆ ಮುಂದಾಗಿದೆ.
ಓದುಗರ ಅನುಕೂಲಕ್ಕಾಗಿ ಡಿಜಿಟಲ್ ಗ್ರಂಥಾಲಯ ಆರಂಭಿಸಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು.
ಏನೇನು ಲಭ್ಯ?
ಇ-ಸಾರ್ವಜನಿಕ ಗ್ರಂಥಾಲಯ ಆನ್ ಲೈನ್’ನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇ-ಪುಸ್ತಕ, ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಗಳು, ಸಿಇಟಿ, ನೀಟ್, ಯುಪಿಎಸ್’ಸಿ, ಕೆಪಿಎಸ್’ಸಿ ಅಲ್ಲದೇ ರಾಜ್ಯ ಸರ್ಕಾರದ ಸಿಬಿಎಸ್’ಸಿ, ಐಸಿಎಸ್’ಐ, ಎನ್.ಸಿ.ಇ.ಆರ್.ಟಿ ಪಠ್ಯಪುಸ್ತಕಗಳು ಮತ್ತು ವಿವಿಧ ಭಾಷೆಗಳ ಪ್ರಾದೇಶಿಕ, ರಾಷ್ಟಿçÃಯ ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳು ಲಭ್ಯ ಇರಲಿವೆ.

ಬಳಸಲು ಹೀಗೆ ಮಾಡಿ
ಇ-ಸಾರ್ವಜನಿಕ ಗ್ರಂಥಾಲಯ ಮೊಬೈಲ್ ಆಪ್ ಹಾಗೂ ಜಾಲತಾಣ  www.karnatakadigitalpubliclibrary.org ಮೂಲಕ ಡೌನ್ ಲೋಡ್ ಮಾಡಿಕೊಳ್ಳಿ. ಬಳಿಕ, ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ ಪಡೆದುಕೊಳ್ಳಿ. ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್, ಟ್ಯಾಬ್ ಮೂಲಕ ಪುಸ್ತಕಗಳನ್ನು ಉಚಿತವಾಗಿ ಓದಬಹುದು. ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-224905ಗೆ ಸಂಪರ್ಕಿಸುವAತೆ ಮುಖ್ಯ ಗ್ರಂಥಾಲಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!