ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು, ಕಾರ್ಯಾಚರಣೆ ಬಳಿಕ ಶವ ಪತ್ತೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೂವರು ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಭೋವಿ ಕಾಲೊನಿಯ ಕೆರೆಯಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ಸೋಮಿನಕೊಪ್ಪದ ಹಾಲೇಶ್ (35) ಮೃತ ವ್ಯಕ್ತಿ. ಶುಕ್ರವಾರ ರಾತ್ರಿ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದಾಗ ನೀರಿನಲ್ಲಿ ಮುಳುಗಿದ್ದಾನೆ. ಶವಕ್ಕಾಗಿ ಶೋಧ ಕಾರ್ಯ ನಡೆದಿದೆ. ಆದರೆ, ಅಂದು ಶವ ಸಿಕ್ಕಿರಲಿಲ್ಲ. ಮಾರನೇ ದಿನ ಶನಿವಾರ ಶವ ಸಿಕ್ಕಿದೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!