ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ವಿಚಾರ ಘೋಷಿಸಿದ್ದೇ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಾಜೀನಾಮೆ ನೀಡುವುದಾಗಿ ಸೋಮವಾರ ಮಧ್ಯಾಹ್ನ 12.44ಕ್ಕೆ ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಅಭಿಮಾನಿಗಳು ಕಮೆಂಟ್ ನಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕೆಲವರು ಪ್ರಾದೇಶಿಕ ಪಕ್ಷ ಕಟ್ಟುವಂತೆ ಸಲಹೆ ನೀಡಿದರೆ, ಹಲವರು ಯಡಿಯೂರಪ್ಪ ಅವರನ್ನು ನಡೆಸಿಕೊಂಡ ರೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಮುಂದಿನ ಚುನಾವಣೆಯ ಭವಿಷ್ಯವನ್ನೂ ನುಡಿದಿದ್ದಾರೆ.
ಉತ್ತಮ ಆಡಳಿತಗಾರ, ಹಿರಿಯ ನಾಯಕರನ್ನು ಹೈಕಮಾಂಡ್ ನಡೆಸಿಕೊಂಡ ರೀತಿಯ ವಿರುದ್ಧ ಆಕ್ರೋಶ ಭರಿತ ಮಾತುಗಳನ್ನಾಡಿದ್ದಾರೆ.