ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟದಲ್ಲಿ ನಿರಂತರ ಏರಿಕೆ, ನದಿ ಪಾತ್ರದವರಿಗೆ ಅಲರ್ಟ್

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಶರಾವತಿ ಯೋಜನೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಏಕ ಪ್ರಕಾರವಾಗಿ ಏರುತ್ತಿದೆ. ಹೀಗಾಗಿ, ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಂಭವ ಇರುವುದರಿಂದ ಅಣೆಕಟ್ಟೆಯ ಕೆಳದಂಡೆ ಹಾಗೂ ನದಿ ಪಾತ್ರದುದ್ದಕ್ಕೂ ಇರುವ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಕೋರಲಾಗಿದೆ.

https://www.suddikanaja.com/2021/07/24/state-biggest-dam-linganamakki-inflow-increase-due-to-hameavy-rain-in-catchment-area/

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 1,819 ಅಡಿ ಇದೆ. ಜುಲೈ 29ರ ಬೆಳಗ್ಗೆ 8 ಗಂಟೆಗೆ ನೀರಿನ ಮಟ್ಟ 1806.20 ಅಡಿಗಳಾಗಿದ್ದು, ಒಳಹರಿವು 18,552 ಕ್ಯೂಸೆಕ್ಸ್ ಆಗಿರುತ್ತದೆ. ಇದೇ ರೀತಿ ಜಲಾಶಯಕ್ಕೆ ನೀರಿನ ಒಳ ಹರಿವು ಮುಂದುವರಿದರೆ ಜಲಾಶಯವು ಪೂರ್ಣ ಮಟ್ಟ ತಲುಪುವ ಸಾಧ್ಯತೆ ಇದೆ ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್)ದ ಪ್ರಕಟಣೆ ತಿಳಿಸಿದೆ.
ನದಿ ಪಾತ್ರದ ಜನರಿಗೆ ಎಚ್ಚರಿಕೆ | ಲಿಂಗನಮಕ್ಕಿ ಅಣೆಕಟ್ಟಿನ ಸುರಕ್ಷತೆ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚಾದ ನೀರನ್ನು ಹೊರ ಬಿಡಲಾಗುವುದು. ಲಿಂಗನಮಕ್ಕಿ ಜಲಾಶಯದಿಂದ ಬಿಟ್ಟ ಎಲ್ಲ ನೀರು ಗೇರುಸೊಪ್ಪ ಜಲಾಶಯಕ್ಕೆ ಹರಿದು ಬರುತ್ತದೆ. ಗೇರುಸೊಪ್ಪ ಜಲಾಶಯವು ನೀರಿನ ಸಂಗ್ರಹವನ್ನು ಗರಿಷ್ಠ ಮಟ್ಟದಲ್ಲಿ ಕಾಪಾಡುವ ಜಲಾಶಯವಾದ್ದರಿಂದ (ಬ್ಯಾಲೆನ್ಸಿಂಗ್ ಜಲಾಶಯ) ಲಿಂಗನಮಕ್ಕಿ ಜಲಾಶಯದಿಂದ ಹೊರಬಿಟ್ಟ ನೀರನ್ನು ಸಂಗ್ರಹಿಸುವ ಅವಕಾಶ ಇರುವುದಿಲ್ಲ.
ಅಣೆಕಟ್ಟೆಯ ಕೆಳದಂಡೆ ಹಾಗೂ ನದಿ ಪಾತ್ರದ ಉದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಎಚ್ಚರಿಸಲಾಗಿದೆ.

https://www.suddikanaja.com/2021/07/23/heavy-rainfall-in-shivamogga-tunga-river-outflow-increase/

error: Content is protected !!