ವಾರಾಂತ್ಯದಲ್ಲಿ ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಬಂದ್, ದೇವರ ದರ್ಶನಕ್ಕೆ ನಿರ್ಬಂಧ

 

 

ಸುದ್ದಿ ಕಣಜ.ಕಾಂ | SAGARA | RELIGIOUS
ಸಾಗರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಪ್ರತಿ‌ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಭಕ್ತಾದಿಗಳು ಸಹಕರಿಸಬೇಕು ಎಂದು ಶ್ರೀ ಕ್ಷೇತ್ರ ಸಿಗಂದೂರು ಧರ್ಮಾಧಿಕಾರಿ ಡಾ. ಎಸ್ ರಾಮಪ್ಪ ತಿಳಿಸಿದ್ದಾರೆ.
ಜಿಲ್ಲಾಡಳಿತ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ನಿಗದಿ ಮಾಡಿರುವ ಕಾರಣ ಭಕ್ತಾದಿಗಳ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ವಾರಾಂತ್ಯದಲ್ಲಿ ಪ್ರತಿ ಶನಿವಾರ ಹಾಗೂ ಭಾನುವಾರ ಶ್ರೀ ಕ್ಷೇತ್ರದಲ್ಲಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

READ | ಭದ್ರಾ ಜಲಾಶಯ ಗೇಟ್ ಓಪನ್, ಹೊರ ಬಿಟ್ಟಿರುವ ನೀರಿನ ಪ್ರಮಾಣವೆಷ್ಟು, ಮಳೆಗಾಲ ಆರಂಭದಲ್ಲೇ ಭದ್ರಾ ಭರ್ತಿ

ದೇವಸ್ಥಾನದಲ್ಲಿ ಇಂದಿನಿಂದ ನಿತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದೆಲ್ಲ ವಿಶೇಷ ಪೂಜೆ ಹಾಗೂ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನಿತರೆ ಉಳಿದ ದಿನಗಳಲ್ಲಿ ಕೇವಲ ಶ್ರೀ ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶ್ರೀ ಸಿಗಂದೂರು ಚೌಡಮ್ಮ ದೇವಿ ಟ್ರಸ್ಟ್ ದೇವಸ್ಥಾನದ ಕಚೇರಿಯ ಪ್ರಧಾನ ಕಾರ್ಯದರ್ಶಿ 9448954052ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

https://www.suddikanaja.com/2021/07/18/jogfalls-covered-with-mist/

error: Content is protected !!