‘ರಾಜೀವ್ ಗಾಂಧಿ ಖೇಲ್ ರತ್ನ’ ಪ್ರಶಸ್ತಿ ಹೆಸರು ಬದಲಿಸಿದ ಪ್ರಧಾನಿ ನರೇಂದ್ರ ಮೋದಿ, ನೀಡಿರುವ ಹೊಸ ಹೆಸರೇನು?

 

 

ಸುದ್ದಿ ಕಣಜ.ಕಾಂ | NATIONAL | SPORTS
ನವ ದೆಹಲಿ: ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ರಾಷ್ಟ್ರಮಟ್ಟದಲ್ಲಿ ನೀಡಲಾಗುವ ‘ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ’ಯ ಹೆಸರನ್ನು ಮರ ನಾಮಕರಣ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ ಎಂದು ಮರು ನಾಮಕರಣ ಮಾಡಲಾಗಿದೆ.

MODI TWEET KHELದೇಶದ ನಾನಾ ಕಡೆಗಳಿಂದ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಧ್ಯಾನ್ ಚಂದ್ ಎಂದು ಮರು ನಾಮಕರಣ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದ್ದರು. ಅವರ ಭಾವನೆಗಳನ್ನು ಗೌರವಿಸಬೇಕು ಎಂಬ ಕಾರಣಕ್ಕೆ ಹೆಸರು ಮರು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

error: Content is protected !!