ಕರ್ನಾಟಕ ಮತ್ತೆ ವೀಕೆಂಡ್ ಲಾಕ್, ಯಾವ ಜಿಲ್ಲೆಗಳಿಗೆ ನಿಯಮ ಅನ್ವಯ, ಏನಿರುತ್ತೆ, ಏನಿರಲ್ಲ?

 

 

ಸುದ್ದಿ ಕಣಜ.ಕಾಂ | KARNATAKA | LOCKDOWN
ಬೆಂಗಳೂರು: ಮಹಾರಾಷ್ಟ್ರ ಮತ್ತು ಕೇರಳಾದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದ್ದು, ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಹೀಗಾಗಿ, ರಾಜ್ಯ ಸರ್ಕಾರ ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿ ಆಗಸ್ಟ್ 6ರಿಂದಲೇ ಅನ್ವಯ ಆಗುವಂತೆ ವೀಕೆಂಡ್ ಮತ್ತು ನೈಟ್ ಕರ್ಫ್ಯೂ ವಿಧಿಸಿ ಆದೇಶಿಸಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶುಕ್ರವಾರ ಮಧ್ಯಾಹ್ನ ಆದೇಶ ಹೊರಡಿಸಿದ್ದು, ಆಗಸ್ಟ್ 16ರ ವರೆಗೆ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 9 ರಿಂದ ಮುಂಜಾನೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಕೇರಳಾ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ.

https://www.suddikanaja.com/2021/04/23/shivamogga-is-ready-for-weekend-curfew/

ಯಾವ ಜಿಲ್ಲೆಗಳಿಂದ ವೀಕೆಂಡ್ ಕರ್ಫ್ಯೂ ಅನ್ವಯ

ಕೇರಳ ಗಡಿ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಹೇಗಿರಲಿದೆ ವೀಕೆಂಡ್ ಕರ್ಫ್ಯೂ

  • ವೀಕೆಂಡ್ ಕರ್ಫ್ಯೂ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದೆ. ಅದರಂತೆ, ಅಗತ್ಯ ವಸ್ತುಗಳ ಖರೀದಿಗೆ ಯಾವುದೇ ರೀತಿಯ ಸಮಸ್ಯೆ ಇರುವುದಿಲ್ಲ. ಬೆಳಗ್ಗೆ 5ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
  • ಬೀದಿ ಬದಿಯ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಅವಕಾಶ
  • ರೈಲು, ವಿಮಾನ ಹಾರಾಟಕ್ಕೆ ಯಾವುದೇ ನಿಬರ್ಂಧ ಇರುವುದಿಲ್ಲ. ವೀಕೆಂಡ್‍ನಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಇರಲಿದೆ.
  • ಮದ್ಯ ಸರ್ವಿಸ್ ನೀಡುವಂತಿಲ್ಲ. ಬಾರ್ ಗಳಿಂದ ಪಾರ್ಸೆಲ್ ಪಡೆಯಬಹುದು.
  • ಜಾತ್ರೆ ಆಚರಣೆ, ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕು ನಿರ್ಬಂಧವಿದೆ.

https://www.suddikanaja.com/2021/04/22/dc-shivakumar-brief-about-night-and-weekend-curfew/

error: Content is protected !!