ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭಯಪಡಬೇಕಿಲ್ಲ, ಸರ್ಕಾರ ಅವರೊಂದಿಗಿದೆ: ಬಿ.ಎಸ್.ವೈ ಅಭಯ

 

 

ಸುದ್ದಿ ಕಣಜ.ಕಾಂ

ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ಶಿವಮೊಗ್ಗದಲ್ಲಿ ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್
ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ `ಜ್ಞಾನ ದೀವಿಗೆ’ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುವ ವರ್ಚ್ಯುವಲ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೋವಿಡ್’ನಿಂದಾಗಿ ತರಗತಿಗೆ ಹೋಗಲಾಗದೇ ಅಂತರ್ಜಾಲ ತೊಂದರೆಯಿಂದ ಗ್ರಾಮೀಣ ಭಾಗದ ಎಸ್‍.ಎಸ್‍.ಎಲ್‍.ಸಿ ವಿದ್ಯಾರ್ಥಿಗಳ ವ್ಯಾಸಾಂಗಕ್ಕೆ ಅಡ್ಡಿಯಾಗಿದೆ. ಈ ವಿಚಾರದ ಸರ್ಕಾರದ ಗಮನಕ್ಕೆ ಬಂದಿದೆ. ಅವರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದು ಭರವಸೆ ನೀಡಿದರು‌.
* 2.68 ಲಕ್ಷ ವಿದ್ಯಾರ್ಥಿಗಳಿಗೆ ಲಾಭ: ಜ್ಞಾನ ದೀವಿಗೆ ಕಾರ್ಯಕ್ರಮದಡಿ ರಾಜ್ಯದ 2.68 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನ ಆಗಲಿದೆ. ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿ ಜಾರಿಯಾಗಲಿದೆ ಎಂದರು.

Leave a Reply

Your email address will not be published. Required fields are marked *

error: Content is protected !!