ಮಕ್ಕಳಿಗೆ ಆರತಿ ಬೆಳಗಿ ಸ್ವಾಗತ, ಹೇಗಿತ್ತು ಶಾಲೆ, ಕಾಲೇಜುಗಳ ಮೊದಲ ದಿನ?

 

 

ಸುದ್ದಿ ಕಣಜ.ಕಾಂ | DISTRICT | EDUCATION
ಶಿವಮೊಗ್ಗ: ಜಿಲ್ಲೆಯಾದ್ಯಂತ ಸೋಮವಾರದಿಂದ 9, 10 ಮತ್ತು ಪಿಯುಸಿ ಭೌತಿಕ ತರಗತಿಗಳು ಪುನರಾರಂಭಗೊಂಡಿವೆ. ಸುದೀರ್ಘ ರಜೆಯ ನಂತರ ತರಗತಿಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಅತ್ಯಂತ ಶ್ರದ್ಧೆಯಿಂದ ಶಾಲಾ, ಕಾಲೇಜುಗಳಿಗೆ ಆಗಮಿಸಿದರು.

https://www.suddikanaja.com/2020/12/24/yoga-classes-in-shivamogga/

ಕೊರೊನಾ ಮೂರನೇ ಅಲೆಯ ಭೀತಿಯ ನಡುವೆಯೇ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದ್ದು, ಮೊದಲ ದಿನ ಉತ್ತಮ ಸ್ಪಂದನೆ ದೊರೆತಿದೆ. ವಿದ್ಯಾರ್ಥಿಗಳ ಸ್ವಾಗತಕ್ಕೆ ಶಾಲಾ- ಕಾಲೇಜುಗಳನ್ನು ಅಲಂಕರಿಸಲಾಗಿದ್ದು, ಸ್ಯಾನಿಟೈಸ್ ಮಾಡಲಾಗಿದೆ. ಸಾಮಾಜಿಕ ಅಂತರದೊಂದಿಗೆ ತರಗತಿಗಳನ್ನು ನಡೆಸಲಾಗುತ್ತಿದೆ.

school 1
ಆರತಿ ಬೆಳಗಿ ಮಕ್ಕಳ ಸ್ವಾಗತ
ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಸ್ವಾಗತಿಸಿದರು. ಉತ್ತಮ ವಿದ್ಯಾಭ್ಯಾಸ ಮಾಡುವಂತೆ ಶುಭ ಕೋರಲಾಯಿತು. ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಹ ಈ ವೇಳೆ ಉಪಸ್ಥಿತರಿದ್ದರು. ಸರ್ಕಾರಿ ಮೇನ್ ಮಿಡಲ್ ಶಾಲೆಯಲ್ಲಿ ಮಾಡಿಕೊಳ್ಳಲಾಗಿರುವ ಕೋವಿಡ್ ಸುರಕ್ಷತಾ ಕ್ರಮಗಳನ್ನು ವೀಕ್ಷಿಸಿದರು. ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಮಾಡುವಂತೆ ಶಿಕ್ಷಕರಿಗೆ ಸೂಚಿಸಲಾಯಿತು.
ಬೆಳಗ್ಗೆ 10 ಗಂಟೆಗೆ ತರಗತಿಗಳು ಆರಂಭಗೊಂಡಿದ್ದು, ಥರ್ಮಲ್ ಸ್ಕ್ಯಾನರ್ ಮೂಲಕ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ನಂತರ ಒಳಗೆ ಬಿಡಲಾಯಿತು.
ಒಪ್ಪಿಗೆ ಪತ್ರ ನೀಡಿದವರಿಗೆ ಎಂಟ್ರಿ
ಶಾಲೆ, ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಮುಂಚೆಯೇ ಸೂಚನೆ ನೀಡಿದಂತೆ ಅವರಿಂದ ಒಪ್ಪಿಗೆ ಪತ್ರ ಪಡೆಯಲಾಯಿತು. ಇದಕ್ಕೋಸ್ಕರ ಆಯಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತ್ಯೇಕ ಮಾದರಿ ಮಾಡಿಕೊಳ್ಳಲಾಗಿದ್ದು, ಅದರ ಮೇಲೆ ಪಾಲಕರು ಇಲ್ಲವೇ ಪೋಷಕರ ಸಹಿ ಪಡೆದು ಬಂದವರಿಗೆ ಮಾತ್ರ ತರಗತಿಗೆ ಪ್ರವೇಶ ನೀಡಲಾಯಿತು. ಬಂದವರಲ್ಲಿ ಎಲ್ಲರೂ ಒಪ್ಪಿಗೆ ಪತ್ರ ತಂದಿದ್ದರು.
ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು?
9ನೇ ತರಗತಿಯಲ್ಲಿ 25,405 ಮತ್ತು 10ನೇ ತರಗತಿಯಲ್ಲಿ 24,600 ವಿದ್ಯಾರ್ಥಿಗಳಿದ್ದು, ಪಿಯುಸಿಯಲ್ಲಿ ಒಟ್ಟು 38,000 ವಿದ್ಯಾರ್ಥಿಗಳಿದ್ದಾರೆ.

https://www.suddikanaja.com/2021/07/22/kuvempu-university-offline-classes-will-reopen/

error: Content is protected !!