ಸುದ್ದಿ ಕಣಜ.ಕಾಂ | TALUK | CRIME
ಶಿವಮೊಗ್ಗ: ತಾಲೂಕಿನ ಮತ್ತೋಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದರಲ್ಲಿ ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಳವು ಮಾಡಿದ್ದ ಇಬ್ಬರನ್ನು ಬಂಧಿಸಿ, ಅವರಿಂದ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಮತ್ತೊಡು ಗ್ರಾಮದಲ್ಲಿ ಮೋಹನ್ ಕುಮಾರ್ ಎಂಬುವವರು ಹೊಸದಾಗಿ ಮನೆಯನ್ನು ನಿರ್ಮಾಣ ಮಾಡುತ್ತಿದ್ದರು. ಆಗ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಳ್ಳತನ ಮಾಡಿ ಇವರಿಬ್ಬರು ಪರಾರಿಯಾಗಿದ್ದರು. ಮನೆಯ ಮಾಲೀಕ ಮೋಹನ್ ಅವರು ದೂರು ನೀಡಿದ್ದರು. ಅದರನ್ವಯ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
https://www.suddikanaja.com/2021/06/08/accused-arrested-2/