ಮಹಾನಗರ ಪಾಲಿಕೆಯ ಎದುರು ಕೋಲಾಹಲ, ಪೊಲೀಸ್ ಬಿಗಿ ಭದ್ರತೆ, ಕಾರಣವೇನು ಗೊತ್ತಾ?

 

 

ಸುದ್ದಿ ಕಣಜ.ಕಾಂ | CITY CORPORATION | PROTEST
ಶಿವಮೊಗ್ಗ: ಆಸ್ತಿ ತೆರಿಗೆ ವಿರುದ್ಧ ಮಹಾನಗರ ಪಾಲಿಕೆಯ ಕಚೇರಿ ಎದುರು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಹಾಗೂ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.

https://www.suddikanaja.com/2021/07/14/property-tax/

ಪಾಲಿಕೆಯ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯುತ್ತಿದ್ದರೆ ಹೊರಗಡೆ ಅಕ್ಷರಶಃ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಹೋರಾಟಗಾರರಿಗೆ ಪಾಲಿಕೆಯ ಆವರಣದೊಳಗೆ ಪ್ರವೇಶಿಸದಂತೆ ತಡೆಯಲಾಗಿತ್ತು.

ಆಸ್ತಿ ತೆರಿಗೆಯನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ಉದ್ಯೋಗವಿಲ್ಲದೇ ಜನರು ಕಷ್ಟದಲ್ಲಿದ್ದಾರೆ. ಹೀಗಿರುವಾಗ, ತೆರಿಗೆ ಏರಿಕೆ ಮಾಡಿರುವುದು ಅವೈಜ್ಞಾನಿಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಬ್ ರೆಜಿಸ್ಟ್ರಾರ್ ಎಸ್.ಆರ್.ದರದ ಮೇಲೆ ನಿಗದಿ ಮಾಡುವ ಮೂಲಕ ವಾರ್ಷಿಕ ತೆರಿಗೆ ಪರಿಷ್ಕರಣೆ ಮಾಡಲಾಗುತ್ತಿದೆ. ಇದು ಅತ್ಯಂತ ಅವೈಜ್ಞಾನಿಕ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ.ವಸಂತ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಗಿರೀಶ್, ಪಾಲಿಕೆ ಸದಸ್ಯ ಎಚ್.ಸಿ.ಯೋಗೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

https://www.suddikanaja.com/2021/06/30/property-tax-relaxation-period-extended/

error: Content is protected !!