ಆರು ತಿಂಗಳಲ್ಲಿ ಸಿದ್ಧವಾಗಲಿದೆ ಶಿವಮೊಗ್ಗ ವಿಮಾನ ನಿಲ್ದಾಣ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

 

 

ಸುದ್ದಿ ಕಣಜ.ಕಾಂ | DISTRICT | POLITICS
ಶಿವಮೊಗ್ಗ: ಭರದಿಂದ ಸಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯು ಇನ್ನೂ ಆರು ತಿಂಗಳಲ್ಲಿ ಪೂರ್ಣಗೊಳ್ಳುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

https://www.suddikanaja.com/2021/07/28/truck-terminal-in-shivamogga/

ವಿನೋಬ ನಗರದ ನಿವಾಸದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣ ಪೂರ್ಣಗೊಂಡ ಸಾರ್ವಜನಿಕರಿಗೆ ಇದರ ಸೇವೆ ಪ್ರಾಪ್ತವಾಗಲಿದೆ. ತ್ವರಿತ ಗತಿಯಲ್ಲಿ ಕೆಲಸಗಳು ನಡೆಯುತ್ತಿದ್ದು, ಬರುವ ದಿನಗಳಲ್ಲಿ ಈ ವಾಯುಯಾನ ಕೈಗಾರಿಕೆಗಳಿಗೆ ಸಹಕಾರಿಯಾಗಲಿದೆ. ಜತೆಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.
ನಾನು ಅಧಿಕಾರದಲ್ಲಿ ಇರದಿದ್ದರೂ ಜನರ ಸಂಕಷ್ಟಗಳಿಗೆ ಸ್ಪಂದಿಸುವುದಕ್ಕಾಗಿ ನಮ್ಮ ಮನೆಯ ಬಾಗಿಲು ದಿನದ 24 ಗಂಟೆ ತೆರೆದಿದೆ. ನನ್ನ ಅಧಿಕಾರ ಅವಧಿಯಲ್ಲಿ ಎಲ್ಲ ಜಾತಿಯವರನ್ನು ಸಮಾನವಾಗಿ ಕಂಡಿದ್ದೇನೆ. ಅವರು ನನಗೆ ಅಷ್ಟೇ ಪ್ರೀತಿ ನೀಡಿದ್ದಾರೆ ಎಂದರು.

ಮುಂಬರುವ ಚುನಾವಣೆಯಲ್ಲಿ ಪೂರ್ಣ ಬಹುಮತ

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆದು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಪ್ರಯತ್ನಿಸಲಾಗುವುದು. ಇದಕ್ಕಾಗಿ, ಗಣೇಶೋತ್ಸವ ನಂತರ ರಾಜ್ಯದಾದ್ಯಂತ ಪ್ರಯಾಣಿಸಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರೊಂದಿಗೆ ಪ್ರವಾಸ ಕೈಗೊಳ್ಳಲಾಗುವುದು. ಪಕ್ಷವನ್ನು ಸಂಘಟಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಚನ್ನಬಸಪ್ಪ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

https://www.suddikanaja.com/2020/11/26/protest-for-siganduru-temple/

error: Content is protected !!