ಸಹ್ಯಾದ್ರಿ ಕಾಲೇಜಿಗೆ ಬಂದಿದ್ದ ಕುಲಪತಿಗಳಿಗೆ ವಿದ್ಯಾರ್ಥಿಗಳಿಂದ‌ ಘೇರಾವ್, ಗಂಟೆಗಟ್ಟಲೇ ಚರ್ಚೆ ಬಳಿಕ ಶಾಂತರಾದ ಸ್ಟೂಡೆಂಟ್ಸ್

 

 

ಸುದ್ದಿ ಕಣಜ.ಕಾಂ | CITY | SAHYADRI COLLEGE
ಶಿವಮೊಗ್ಗ: ಸಹ್ಯಾದ್ರಿ ಕಾಲೇಜಿನಲ್ಲಿ ಖೇಲೋ ಇಂಡಿಯಾ ಯೋಜನೆ ವಿರೋಧಿಸಿ ವಿದ್ಯಾರ್ಥಿಗಳು ಬುಧವಾರ ಸಂಜೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಘೇರಾವ್ ಹಾಕಿದರು.
save sahyadri college logoಕಾಲೇಜಿನ ಕಾರ್ಯಕ್ರಮಕ್ಕೆ ಬಂದಿದ್ದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅವರನ್ನು ಘೇರಾವ್ ಹಾಕಲಾಯಿತು. ವಿದ್ಯಾರ್ಥಿಗಳು ಗಂಟೆಗಟ್ಟಲೇ ಅವರನ್ನು ಸುತ್ತುವರಿದಿದ್ದರು. ತಮ್ಮ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿ‌ ಮುನ್ನಡೆಯುವಂತೆ ಆಗ್ರಹಿಸಿದರು. ಅದಕ್ಕೆ ಸಮಜಾಯಿಷಿ ನೀಡಲು ಮುಂದಾದರೂ ವಿದ್ಯಾರ್ಥಿಗಳು ಅದ್ಯಾವುದನ್ನೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ.
ಸಹ್ಯಾದ್ರಿ ಕ್ಯಾಂಪಸ್ ಉಳಿಸಿ ಹೋರಾಟ ವೇದಿಕೆ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

error: Content is protected !!