ಮದುವೆಯಾಗಿ 2 ವರ್ಷವಾದರೂ ಮಕ್ಕಳಾಗಿಲ್ಲವೆಂಬ ಕಾರಣಕ್ಕೆ ಮನನೊಂದು ಗೃಹಿಣಿ ಆತ್ಮಹತ್ಯೆ

 

 

ಸುದ್ದಿ‌ ಕಣಜ.ಕಾಂ‌ | TALUK | CRIME
ಸೊರಬ: ತಾಲೂಕಿನ ದ್ಯಾವಾಸ ಗ್ರಾಮದಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪಲ್ಲವಿ(26) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶವವು ಮನೆಯ ಮುಂದಿನ ಬಾವಿಯಲ್ಲಿ ಪತ್ತೆಯಾಗಿದೆ.
ಮದುವೆಯಾಗಿ ಎರಡು ವರ್ಷಗಳು ಗತಿಸಿವೆ. ಆದರೂ ಮಕ್ಕಳು ಆಗಿಲ್ಲ. ಇದರಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ ಮಹಿಳೆಯು ಮನೆಯಿಂದ ನಾಪತ್ತೆಯಾಗಿದ್ದು, ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ. ಗುರುವಾರ ಬೆಳಗ್ಗೆ ಬಾವಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

error: Content is protected !!