ಸುದ್ದಿ ಕಣಜ.ಕಾಂ | TALUK | CRIME
ಸಾಗರ: ತಾಲೂಕಿನ ತಾಳಗುಪ್ಪ ಸಮೀಪದ ಹಿರೇಮನೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸಂಬಂಧಿಸಿ ಕೊಟ್ಟಿಗೆಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಯಾಗಿತ್ತು.
ಬಾಲಚಂದ್ರ ಎಂಬುವವರ ಕೊಟ್ಟಿಗೆಗೆ ಬೆಂಕಿ ತಗುಲಿದ್ದು, ಅಂದಾಜು ₹50,000 ಮೌಲ್ಯದ ಹುಲ್ಲು ಸುಟ್ಟು ಭಸ್ಮವಾಗಿದೆ. ತಕ್ಷಣ ಅಕ್ಕಪಕ್ಕದವರು ಸೇರಿ ನೀರು ಹಾಕಿ ಬೆಂಕಿಯನ್ನು ನಂದಿಸಲು ಸಹಕರಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.