ಸುದ್ದಿ ಕಣಜ.ಕಾಂ | KARNATAKA | JOB JUNCTION
ಶಿವಮೊಗ್ಗ: ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಿದೆ.
ಆಸಕ್ತರು ಸೆಪ್ಟೆಂಬರ್ 14 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತ ಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಮದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2515944, 9964760090 ಅನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಆರ್.ರಾಜಣ್ಣ ತಿಳಿಸಿದ್ದಾರೆ.