SHIVAMOGGA JOB ALERT | ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಉದ್ಯೋಗ ಅವಕಾಶ, ಯಾವ ಹುದ್ದೆಗೆ ಏನು ವಿದ್ಯಾರ್ಹತೆ?

 

 

ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವ ಲೆಕ್ಕಿಗರು ಮತ್ತು ಜವಾನರ ತಲಾ 1 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

https://www.suddikanaja.com/2021/05/02/mansi-joshi-finished-her-journey-from-paru-serial-she-expressed-her-experience-with-serial/

ಈ ನೇಮಕಾತಿಯು 1 ವರ್ಷದ ಕರಾರಿನ ಆಧಾರದ ಮೇಲಿದ್ದು ಆಯ್ಕೆಯಾದ ಸಿಬ್ಬಂದಿಗೆ ಮಾಸಿಕ ಗೌರವಧನ ನೀಡಲಾಗುತ್ತದೆ. ಲೆಕ್ಕಿಗರ ಹುದ್ದೆಗೆ ಗೌರವ ಧನ ₹13,310 ಆಗಿದ್ದು, ಅಭ್ಯರ್ಥಿಯು ಬಿ.ಕಾಂ ಪದವಿ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
ಲೆಕ್ಕ ಪತ್ರಗಳನ್ನು ನಿರ್ವಹಿಸುವ ಕುರಿತು ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು (ಅನುಭವ ಪ್ರಮಾಣ ಪತ್ರ ಲಗತ್ತಿಸಬೇಕು),ಕನ್ನಡ ಮತ್ತು ಇಂಗ್ಲಿಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ ಇರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಅವಶ್ಯಕವಾಗಿರುತ್ತದೆ (ಎಂ.ಎಸ್ ಆಫೀಸ್, ಇಂಟರ್‍ನೆಟ್ ಆಪರೇಷನ್ ಕಡ್ಡಾಯ).
ಟ್ಯಾಲಿ ಸಾಫ್ಟ್ ವೇರ್ ಅನ್ನು ಉಪಯೋಗಿಸುವ ಜ್ಞಾನ ಮತ್ತು ಕೌಶಲ್ಯ ಹೊಂದಿರಬೇಕು. ಕಚೇರಿ ಪತ್ರ ವ್ಯವಹಾರಗಳ ಲೆಕ್ಕ ಪತ್ರಗಳ ವ್ಯವಹಾರಗಳನ್ನು ಗಣಕೀಕೃತದಲ್ಲಿ ನಮೂದಿಸಿ ಕೇಂದ್ರ ಕಚೇರಿಗಳಿಗೆ ಕಳುಹಿಸುವ ಕುರಿತು ಪರಿಣಿತಿ ಹೊಂದಿರಬೇಕು.
ಜವಾನ ಹುದ್ದೆಗೆ ಇರಬೇಕಾದ ಅರ್ಹತೆ
ಕಚೇರಿ ಜವಾನರು ಹುದ್ದೆಗೆ ಗೌರವಧನ ₹10,648 ಆಗಿದ್ದು, ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಕಚೇರಿ ಹಾಗೂ ಇತರೆ ಶುಚಿತ್ವ ಕಾಪಾಡುವ ಕೆಲಸ ನಿರ್ವಹಿಸಿದ ಅನುಭವ ಹೊಂದಿರಬೇಕು. ಓದಲು, ಬರೆಯಲು ಕಡ್ಡಾಯವಾಗಿ ಬರಬೇಕು. ಕಚೇರಿ ವ್ಯವಹಾರಕ್ಕೆ ಬ್ಯಾಂಕ್ ಇತರೆ ಇಲಾಖೆಗಳಿಗೆ ಹೋಗಬೇಕಾಗಿರುತ್ತದೆ. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ, ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳಾಗಿರಬಾರದು.
ಅರ್ಜಿಯನ್ನು‌ ಹೀಗೆ ಸಲ್ಲಿಸಿ
ಅಭ್ಯರ್ಥಿಗಳು ಅರ್ಜಿಯನ್ನು ಬಿಳಿ ಹಾಳೆಯಲ್ಲಿ ಸ್ವವಿವರಗಳನ್ನು ನಮೂದಿಸಿದ ಬಯೋಡೇಟಾ, ಅಂಕ ಪಟ್ಟಿ, ಅನುಭವ ಪ್ರಮಾಣ ಪತ್ರದೊಂದಿಗೆ ಜಿಲ್ಲಾ ಅಧಿಕಾರಿಗಳು ಮತ್ತು ಅಧ್ಯಕ್ಷರು ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸೊಸೈಟಿ ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಇವರ ಹೆಸರಿಗೆ ಬರೆದು, ಈ ಅರ್ಜಿಯನ್ನು ಕಾರ್ಮಿಕ ಅಧಿಕಾರಿ, ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಅಧಿಕಾರಿಗಳ ಕಚೇರಿ, 2ನೇ ಮಹಡಿ ವಾಣಿಜ್ಯ ಸಂಕೀರ್ಣ, ಸಿ.ಐ.ಟಿ.ಬಿ (ಸೂಡಾ) ಕಾಂಪ್ಲೆಕ್ಸ್, ಪೊಲೀಸ್ ಚೌಕಿ, ವಿನೋಬನಗರ, ಶಿವಮೊಗ್ಗ ಇವರಿಗೆ ಸೆಪ್ಟೆಂಬರ್ 27 ರೊಳಗೆ ತಲುಪಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

https://www.suddikanaja.com/2021/02/06/central-government-agrees-to-give-extra-chance-candidate-who-have-last-chance-to-write-upsc-exam/

error: Content is protected !!